ಹ್ಯಾಮಿಲ್ಟನ್: ವೆಸ್ಟ್ ಇಂಡೀಸ್ ವಿರುದ್ಧ ನಡೆದ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಗೆದ್ದ ಭಾರತ ಮಹಿಳೆಯರ ತಂಡ ಟೂರ್ನಿಯಲ್ಲಿ ನಾಕೌಟ್ ಹಂತದ ಆಸೆ ಜೀವಂತವಾಗಿರಿಸಿದೆ.
ವಿಂಡೀಸ್ ತಂಡವನ್ನು 155 ರನ್ ಗಳಿಂದ ಸೋಲಿಸಿದ ಭಾರತ ತಂಡಕ್ಕೆ ಮುಂದಿನ ಹಂತದಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದಂತಹ ಪ್ರಬಲ ತಂಡವನ್ನು ಎದುರಿಸಬೇಕಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 317 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ವಿಂಡೀಸ್ 162 ರನ್ ಗಳಿಗೆ ಆಲೌಟ್ ಆಯಿತು.
ಈ ಪಂದ್ಯದಲ್ಲಿ ಭಾರತದ ಪರ ಶತಕ ಗಳಿಸಿದ್ದ ಸ್ಮತಿ ಮಂಥನಾಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಯಿತು. ಆದರೆ ಹರ್ಮನ್ ಪ್ರೀತ್ ಕೌರ್ ಕೂಡಾ ಶತಕ ಗಳಿಸಿದ್ದರು. ಹೀಗಾಗಿ ಸ್ಮೃತಿ ತಮಗೆ ಸಿಕ್ಕ ಪ್ರಶಸ್ತಿಯನ್ನು ಹರ್ಮನ್ ಜೊತೆ ಹಂಚಿಕೊಳ್ಳುವ ನಿರ್ಧಾರ ಮಾಡಿದರು.