Select Your Language

Notifications

webdunia
webdunia
webdunia
webdunia

INDvAFG T20I: ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್

INDvAFG T20

Krishnaveni K

ಬೆಂಗಳೂರು , ಬುಧವಾರ, 17 ಜನವರಿ 2024 (18:58 IST)
ಬೆಂಗಳೂರು: ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ನಡೆಯುತ್ತಿರುವ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಭಾರತ ಕೆಲವು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ಎರಡೂ ತಂಡಗಳು ಮೂರು ಬದಲಾವಣೆ ಮಾಡಿಕೊಂಡಿದೆ.

ಭಾರತ ತಂಡದಲ್ಲಿ ನಿರೀಕ್ಷೆಯಂತೇ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಗೆ ಅವಕಾಶ ನೀಡಲಾಗಿದೆ. ಅಕ್ಸರ್ ಪಟೇಲ್ ಸ್ಥಾನಕ್ಕೆ ಕುಲದೀಪ್ ಯಾದವ್ ಮತ್ತು ಅರ್ಷ್ ದೀಪ್ ಸಿಂಗ್ ಬದಲಿಗೆ ಆವೇಶ್ ಖಾನ್ ಗೆ ಸ್ಥಾನ ನೀಡಲಾಗಿದೆ.

ಕಳೆದ ಎರಡೂ ಪಂದ್ಯಗಳನ್ನು ಟೀಂ ಇಂಡಿಯಾ ಭರ್ಜರಿಯಾಗಿ ಗೆದ್ದುಕೊಂಡು ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯವನ್ನು ಗೆದ್ದರೆ ಭಾರತ ಸರಣಿ ವೈಟ್ ವಾಶ್ ಮಾಡಿಕೊಂಡಂತಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೀಂ ಇಂಡಿಯಾ ಟ್ರೈನಿಂಗ್ ಸೆಷನ್ ಗೆ ಬಂದ ರಿಷಬ್ ಪಂತ್