Publish Date: Wed, 17 Jan 2024 (19:31 IST)
Updated Date: Wed, 17 Jan 2024 (19:34 IST)
ಬೆಂಗಳೂರು: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಆಘಾತ ಅನುಭವಿಸಿದೆ.
ನಾಲ್ಕೇ ಓವರ್ ಗಳಲ್ಲಿ ಪ್ರಮುಖ ನಾಲ್ಕು ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಗಿದೆ. ಆರಂಭಿಕರಾಗಿ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಕಣಕ್ಕಿಳಿದರು. ಈ ಪೈಕಿ ಜೈಸ್ವಾಲ್ 4 ರನ್ ಗೆ ವಿಕೆಟ್ ಒಪ್ಪಿಸಿದರು.
ಆದರೆ ಈ ಸರಣಿಯಲ್ಲಿ ಕಳೆದ ಎರಡೂ ಪಂದ್ಯಗಳಲ್ಲಿ ಅಜೇಯರಾಗಿ ಅರ್ಧಶತಕ ಸಿಡಿಸಿದ್ದ ಶಿವಂ ದುಬೆ 1 ರನ್ ಗೆ ವಿಕೆಟ್ ಒಪ್ಪಿಸಿದರೆ, ಸಂಜು ಸ್ಯಾಮ್ಸನ್, ವಿರಾಟ್ ಕೊಹ್ಲಿ ಶೂನ್ಯ ಸುತ್ತಿದರು. ಇದೀಗ ರೋಹಿತ್ ಶರ್ಮಾ 12 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದು ರಿಂಕು ಸಿಂಗ್ ಇನ್ನೂ ಖಾತೆ ತೆರೆಯದೇ ಕ್ರೀಸ್ ನಲ್ಲಿದ್ದಾರೆ. ಅಫ್ಘಾನಿಸ್ತಾನ ಪರ ಫರೀದ್ ಅಹಮ್ಮದ್ ಮಲಿಕ್ 3, ಅಸ್ಮತುಲ್ಲಾ ಒಮರ್ ಝೈ 1 ವಿಕೆಟ್ ಕಬಳಿಸಿದ್ದಾರೆ.