ಮುಂಬೈ: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ದ್ವಿತೀಯ ಟಿ20 ಪಂದ್ಯವಾಡಲು ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಇಂದೋರ್ ಗೆ ತೆರಳಿದ್ದಾರೆ.
ಅಫ್ಘಾನಿಸ್ತಾನ ವಿರುದ್ಧದ ಮೂರೂ ಟಿ20 ಪಂದ್ಯಗಳಿಗೆ ವಿರಾಟ್ ಕೊಹ್ಲಿ ಆಯ್ಕೆಯಾಗಿದ್ದರು. ಆದರೆ ಮೊದಲ ಟಿ20 ಪಂದ್ಯದಂದು ಮಗಳು ವಮಿಕಾ ಬರ್ತ್ ಡೇ ನಿಮಿತ್ತ ಕೊಹ್ಲಿ ಗೈರಾಗಿದ್ದರು.
ನಾಳೆ ನಡೆಯಲಿರುವ ಎರಡನೇ ಪಂದ್ಯದ ವೇಳೆ ಅವರು ತಂಡಕ್ಕೆ ಕಮ್ ಬ್ಯಾಕ್ ಮಾಡಲಿದ್ದಾರೆ. ಮುಂಬೈ ವಿಮಾನ ನಿಲ್ದಾಣದ ಮೂಲಕ ಕೊಹ್ಲಿ ಇಮದೋರ್ ಗೆ ಪ್ರಯಾಣ ಬೆಳೆಸಿದ್ದಾರೆ. ಹೀಗಾಗಿ ಎರಡನೇ ಪಂದ್ಯಕ್ಕೆ ಅವರು ಲಭ್ಯರಿರುವುದು ಪಕ್ಕಾ ಆಗಿದೆ.
ಕಳೆದ ಒಂದೂವರೆ ವರ್ಷದಿಂದ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯವಾಡಿಲ್ಲ. ಹೀಗಾಗಿ ಅವರು ಕಮ್ ಬ್ಯಾಕ್ ಮಾಡುವುದನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ರೋಹಿತ್ ಮತ್ತು ಕೊಹ್ಲಿ ಎರಡನೇ ಪಂದ್ಯದಲ್ಲಿ ಓಪನಿಂಗ್ ಮಾಡಿದರೆ ಅದು ಅಭಿಮಾನಿಗಳಿಗೆ ಹಬ್ಬವಾಗಲಿದೆ.