Daily Horoscope
✕

ಟೀಂ ಇಂಡಿಯಾ ಮೊದಲ ಇನಿಂಗ್ಸ್ ಮುನ್ನಡೆ ದಾಟಿದ ಇಂಗ್ಲೆಂಡ್

Krishnaveni K
ಶನಿವಾರ, 27 ಜನವರಿ 2024 (15:24 IST)
ಹೈದರಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗಳಿಸಿದ್ದ ಮೊದಲ ಇನಿಂಗ್ಸ್ ಮುನ್ನಡೆಯನ್ನು ದಾಟಿ ಇಂಗ್ಲೆಂಡ್ ಬ್ಯಾಟಿಂಗ್ ಮಾಡುತ್ತಿದೆ.

ಮೊದಲ ಇನಿಂಗ್ಸ್ ನಲ್ಲಿ ಇಂಗ್ಲೆಂಡ್ 246 ರನ್ ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ 436 ರನ್ ಗಳಿಸಿ 190 ರನ್ ಗಳ ಬೃಹತ್ ಮುನ್ನಡೆ ಪಡೆಯಿತು. ಆದರೆ ಮೊದಲ ಇನಿಂಗ್ಸ್ ನಂತೆ ಇಂಗ್ಲೆಂಡ್ ಎರಡನೇ ಇನಿಂಗ್ಸ್ ನಲ್ಲಿ ಹೆಚ್ಚು ತಪ್ಪು ಮಾಡಲಿಲ್ಲ.

ಆರಂಭಿಕರು ಉತ್ತಮ ಆರಂಭ ನೀಡಿದರು. ಜಾಕ್ ಕ್ರಾವ್ಲೇ 31, ಬೆನ್ ಡಕೆಟ್ 47 ರನ್ ಗಳಿಸಿದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬಂದ ಒಲಿ ಪಾಪ್ 92 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇದರಿಂದಾಗಿ ಇಂಗ್ಲೆಂಡ್ ಇತ್ತೀಚೆಗಿನ ವರದಿ ಬಂದಾಗ 5 ವಿಕೆಟ್ ನಷ್ಟಕ್ಕೆ 226 ರನ್ ಗಳಿಸಿದೆ.

ಆದರೆ ಅನುಭವಿ ಜೋ ರೂಟ್ ಬೌಲಿಂಗ್ ನಲ್ಲಿ ಮಿಂಚಿದ್ದು ಬಿಟ್ಟರೆ ಬ್ಯಾಟಿಂಗ್ ನಲ್ಲಿ ಕಮಾಲ್ ಮಾಡಲಿಲ್ಲ. ಕೇವಲ 2 ರನ್ ಗಳಿಗೆ ಔಟಾಗಿ ನಿರಾಸೆ ಮೂಡಿಸಿದರು.  ಕಳೆದ ಇನಿಂಗ್ಸ್ ನಲ್ಲಿ ಅರ್ಧಶತಕ ಸಿಡಿಸಿದ್ದ ಜಾನಿ ಬೇರ್ ಸ್ಟೋ ಈ ಇನಿಂಗ್ಸ್ ನಲ್ಲಿ 10 ರನ್ ಗಳಿಸಲಷ್ಟೇ ಶಕ್ತರಾದರು. ನಾಯಕ ಬೆನ್ ಸ್ಟೋಕ್ಸ್ 6 ರನ್ ಗಳಿಸಿ ಔಟಾದರು.

ಭಾರತದ ಪರ ಸ್ಪಿನ್ನರ್ ಗಳಿಗೆ ಸಾಥ್ ನೀಡುತ್ತಿರುವ ಜಸ್ಪ್ರೀತ್ ಬುಮ್ರಾ 2 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ರವಿಚಂದ್ರನ್ ಅಶ್ವಿನ್ 2, ರವೀಂದ್ರ ಜಡೇಜಾ 1 ವಿಕೆಟ್ ಕಬಳಿಸಿದರು. ಇದೀಗ ಇಂಗ್ಲೆಂಡ್ 36 ರನ್ ಗಳ ಮುನ್ನಡೆ ಪಡೆದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ 2nd T20: ನಂಬಲಸಾಧ್ಯ ಗೆಲುವು ದಾಖಲಿಸಿದ ಟೀಂ ಇಂಡಿಯಾ, ತಿಲಕ್ ವರ್ಮ, ನಮನ್ ಧೀರ್ ಮ್ಯಾಜಿಕ್

ಭಾರತ vs ನ್ಯೂಜಿಲ್ಯಾಂಡ್ 2ನೇ T20: ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಟೀಮ್ ಇಂಡಿಯಾ

IND vs NZ: ಆಡುವ ಅವಕಾಶವಿಲ್ಲ ಎಂದರೂ ದೇವರೇ ವೈಭವ್ ಸೂರ್ಯವಂಶಿಗೆ ಒಂದು ಅವಕಾಶ ಮಾಡಿಕೊಡ್ತಿದ್ದಾನೆ..

IND vs NZ 1st T20: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 4 ವಿಕೆಟ್‌ಗಳ ರೋಚಕ ಜಯ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಇಂದು; ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಮುಂದಿನ ಸುದ್ದಿ
Show comments