Publish Date: Wed, 03 Jan 2024 (13:42 IST)
Updated Date: Wed, 03 Jan 2024 (13:45 IST)
ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಈ ಪಿಚ್ ಕೊನೆಯ ಎರಡು ದಿನ ಸ್ಪಿನ್ನರ್ ಸ್ನೇಹಿಯಾಗಿರುವುದರಿಂದ ಮೊದಲು ಬ್ಯಾಟಿಂಗ್ ಮಾಡುವದೇ ಸೂಕ್ತ ಎಂದು ಪಿಚ್ ವರದಿಗಳು ಹೇಳಿತ್ತು. ಅದರಂತೇ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಇಂದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಕಳೆದ ಪಂದ್ಯದಲ್ಲಿ ಗಾಯದಿಂದ ಹೊರಗುಳಿದಿದ್ದ ರವೀಂದ್ರ ಜಡೇಜಾ ವಾಪಸ್ ಆಗಿದ್ದು, ಅಶ್ವಿನ್ ಹೊರಗುಳಿದಿದ್ದಾರೆ. ಇನ್ನು ವೇಗಿ ಶಾರ್ದೂಲ್ ಠಾಕೂರ್ ಬದಲಿಗೆ ಮುಕೇಶ್ ಕುಮಾರ್ ಗೆ ಅವಕಾಶ ನೀಡಲಾಗಿದೆ.
ಇತ್ತೀಚೆಗಿನ ವರದಿ ಬಂದಾಗ ಆಫ್ರಿಕಾ ವಿಕೆಟ್ ನಷ್ಟವಿಲ್ಲದೇ 3 ರನ್ ಗಳಿಸಿತ್ತು. ಸರಣಿಯಲ್ಲಿ 0-1 ರಿಂದ ಹಿನ್ನಡೆಯಲ್ಲಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲೇಬೇಕಾದ ಒತ್ತಡದಲ್ಲಿದೆ.