ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆಯಾಗುವುದು ಖಚಿತವಾಗಿದೆ.
ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಇನಿಂಗ್ಸ್ ಅಂತರದಿಂದ ಹೀನಾಯವಾಗಿ ಸೋತಿತ್ತು. ಹೀಗಾಗಿ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಆಫ್ರಿಕಾ ಪಿಚ್ ಗಳು ವೇಗಿಗಳಿಗೆ ಸಹಕಾರಿಯಾಗುವುದರಿಂದ ಇಲ್ಲಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡುವ ತಂಡಕ್ಕೆ ಹೆಚ್ಚು ಅನುಕೂಲವಾಗಲಿದೆ. ಕಳೆದ ಪಂದ್ಯದಲ್ಲಿ ಬೌಲರ್ ಗಳ ಪೈಕಿ ಜಸ್ಪ್ರೀತ್ ಬುಮ್ರಾ ಬಿಟ್ಟರೆ ಉಳಿದವರಿಂದ ನಿರೀಕ್ಷಿತ ಫಲಿತಾಂಶ ಬಂದಿರಲಿಲ್ಲ.
ಹೀಗಾಗಿ ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆಯಾಗುವುದು ಖಚಿತವಾಗಿದೆ. ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕಳೆದ ಪಂದ್ಯದಲ್ಲಿ ಪರಿಣಾಮಕಾರಿಯಾಗಿರಲಿಲ್ಲ. ಹೀಗಾಗಿ ಈ ಪಂದ್ಯಕ್ಕೆ ಅವರನ್ನು ಹೊರಗಿಟ್ಟು ರವೀಂದ್ರ ಜಡೇಜಾ ವಾಪಸ್ ಆಗಬಹುದು. ಅಲ್ಲದೆ ಕರ್ನಾಟಕ ಮೂಲದ ವೇಗಿ ಪ್ರಸಿದ್ಧ ಕೃಷ್ಣಗೂ ಕೊಕ್ ನೀಡುವ ಸಾಧ್ಯತೆಯಿದ್ದು, ಅವರ ಸ್ಥಾನಕ್ಕೆ ಮುಕೇಶ್ ಕುಮಾರ್ ಅಥವಾ ಆವೇಶ್ ಖಾನ್ ಗೆ ಅವಕಾಶ ನೀಡಬಹುದು. ಬ್ಯಾಟಿಂಗ್ ನಲ್ಲಿ ಯಾವುದೇ ಬದಲಾವಣೆಯಿರದು.