Publish Date: Mon, 13 Jul 2026 (17:28 IST)
Updated Date: Mon, 13 Jul 2026 (17:30 IST)
ಲಾರ್ಡ್ಸ್: ಇಂಗ್ಲೆಂಡ್ ವಿರುದ್ಧ ನಡೆದ ಕ್ರಿಕೆಟ್ ಕಾಶಿ ಲಾರ್ಡ್ಸ್ ಅಂಗಣದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಐತಿಹಾಸಿಕ ಟೆಸ್ಟ್ ಗೆಲುವು ಸಾಧಿಸಿದೆ.
ಏಕೈಕ ಟೆಸ್ಟ್ ಪಂದ್ಯವನ್ನು ಹರ್ಮನ್ ಪ್ರೀತ್ ಕೌರ್ ಪಡೆ 270 ರನ್ ಗಳ ಭಾರೀ ಅಂತರದಿಂದ ಗೆದ್ದುಕೊಂಡಿದೆ. ಇದರೊಂದಿಗೆ ಹಲವು ದಾಖಲೆಗಳನ್ನು ಮಾಡಿದೆ. ಗೆಲುವಿಗೆ 457 ರನ್ ಗಳ ಬೃಹತ್ ಗುರಿ ಬೆನ್ನತ್ತಿದ್ದ ಇಂಗ್ಲೆಂಡ್ ಎರಡನೇ ಇನಿಂಗ್ಸ್ ನಲ್ಲಿ 186 ರನ್ ಗಳಿಗೆ ಆಲೌಟ್ ಆಯಿತು. ಮೊದಲ ಇನಿಂಗ್ಸ್ ನಲ್ಲಿ ಭಾರತ 285 ಮತ್ತು ಎರಡನೇ ಇನಿಂಗ್ಸ್ ನಲ್ಲಿ 341 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಇಂಗ್ಲೆಂಡ್ ಮೊದಲ ಇನಿಂಗ್ಸ್ ನಲ್ಲಿ 170 ರನ್ ಗಳಿಗೆ ಆಲೌಟ್ ಆಗಿತ್ತು.
ಭಾರತದ ಪರ ಯಶ್ತಿಕಾ ಭಾಟಿಯಾ ಶತಕ ಸಿಡಿಸುವ ಮೂಲಕ ಲಾರ್ಡ್ಸ್ ಅಂಗಣದಲ್ಲಿ ಶತಕ ದಾಖಲಿಸಿದ ಮೊದಲ ಮಹಿಳಾ ತಾರೆ ಎನಿಸಿಕೊಂಡರು. ಇನ್ನು, ಬೌಲರ್ ಕ್ರಾಂತಿ ಗೌಡ್ ಭಾರತದ ಪರ ಐದು ವಿಕೆಟ್ ಕಬಳಿಸಿ ಲಾರ್ಡ್ಸ್ ಗೋಡೆ ಮೇಲೆ ತಮ್ಮ ಹೆಸರು ಬರೆಯಿಸಿಕಂಡಿದ್ದರು. ಎರಡನೇ ಇನಿಂಗ್ಸ್ ನಲ್ಲಿ ಭಾರತದ ಪರ ಸ್ನೇಹ ರಾಣಾ 4, ದೀಪ್ತಿ ಶರ್ಮಾ, ಕ್ರಾಂತಿ ಗೌಡ್, ಸಯಾಲಿ ಸತ್ಘರೆ ತಲಾ 2 ವಿಕೆಟ್ ಕಬಳಿಸಿದರು. ಇದು ಕ್ರಿಕೆಟ್ ಕಾಶಿಯಲ್ಲಿ ಭಾರತ ತಂಡದ ಮೊದಲ ಗೆಲುವಾಗಿ ದಾಖಲೆ ಮಾಡಿತು.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ