Publish Date: Sat, 21 Feb 2026 (13:37 IST)
Updated Date: Sat, 21 Feb 2026 (13:40 IST)
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ಟಿ20 ಸರಣಿ ನಿರ್ಯಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಹರ್ಮನ್ ಪ್ರೀತ್ ಕೌರ್ ಪಡೆ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯ ಇದೀಗ ಅಡಿಲೇಡ್ ನಲ್ಲಿ ನಡೆಯುತ್ತಿದೆ. ಈಗಾಗಲೇ ಸರಣಿ 1-1 ರಲ್ಲಿ ಸಮಬಲಗೊಂಡಿದೆ. ಮೊದಲ ಪಂದ್ಯ ಗೆದ್ದಿದ್ದ ಭಾರತ ವನಿತೆಯರು ಕಳೆದ ಪಂದ್ಯವನ್ನು ಸೋತಿದ್ದರು.
ಹೀಗಾಗಿ ಇಂದು ಎರಡೂ ತಂಡಕ್ಕೆ ಗೆಲುವು ಅನಿವಾರ್ಯ. ಇಂದಿನ ಪಂದ್ಯಕ್ಕೆ ಕನ್ನಡತಿ ಶ್ರೇಯಾಂಕ ಪಾಟೀಲ್ ಗೆ ಅವಕಾಶ ನೀಡಲಾಗಿದೆ. ಕ್ರಾಂತಿ ಗೌಡ್ ಗೆ ಕೊಕ್ ನೀಡಲಾಗಿದೆ. ವಿಶ್ವಕಪ್ ಗೆದ್ದ ಬಳಿಕ ಭಾರತ ಮಹಿಳಾ ತಂಡಕ್ಕೆ ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸುವ ಸುವರ್ಣಾವಕಾಶ ಎದುರಾಗಿದೆ.
ಇಂದಿನ ಪಂದ್ಯಕ್ಕೆ ಭಾರತ ತಂಡ ಇಂತಿದೆ: ಸ್ಮೃತಿ ಮಂಧಾನ, ಶಫಾಲಿ ವರ್ಮ, ಜೆಮಿಮಾ ರೊಡ್ರಿಗಸ್, ಹರ್ಮನ್ ಪ್ರೀತ್ ಕೌರ್, ರಿಚಾ ಘೋಷ್, ದೀಪ್ತಿ ಶರ್ಮಾ, ಅಮನ್ಜೋತ್ ಕೌರ್, ಶ್ರೇಯಾಂಕ ಪಾಟೀಲ್, ಆರುಂಧತಿ ರೆಡ್ಡಿ, ಶ್ರೀ ಚರಣಿ, ರೇಣುಕಾ ಸಿಂಗ್ ಠಾಕೂರ್.