Select Your Language

Notifications

webdunia
webdunia
webdunia
webdunia

ಪಾಕ್ ಕ್ರಿಕೆಟ್ ತಂಡದ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಇಂಜಮಾಮ್ ಉಲ್ ಹಕ್ ರಾಜೀನಾಮೆ

ಪಾಕ್ ಕ್ರಿಕೆಟ್ ತಂಡದ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಇಂಜಮಾಮ್ ಉಲ್ ಹಕ್ ರಾಜೀನಾಮೆ
ಕರಾಚಿ , ಮಂಗಳವಾರ, 31 ಅಕ್ಟೋಬರ್ 2023 (08:20 IST)
ಕರಾಚಿ: 2023 ನೇ ಏಕದಿನ ವಿಶ್ವಕಪ್ ನಲ್ಲಿ ಪಾಕಿಸ್ತಾನ ತಂಡದ ಹೀನಾಯ ಪ್ರದರ್ಶನದ ಬೆನ್ನಲ್ಲೇ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಇಂಜಮಾಮ್ ಉಲ್ ಹಕ್ ರಾಜೀನಾಮೆ ನೀಡಿದ್ದಾರೆ.

ಪಾಕ್ ತಂಡದ ಕಳಪೆ ಪ್ರದರ್ಶನಕ್ಕೆ ಹೊಣೆ ಹೊತ್ತು ಇಂಜಿ ಆಯ್ಕೆಗಾರನ ಸ್ಥಾನದಿಂದ ಕೆಳಗಿಳಿದಿದ್ದಾರೆ. ಬರೀ ಇದಷ್ಟೇ ಕಾರಣವಲ್ಲ. ಪಾಕ್ ಕ್ರಿಕೆಟ್ ಮಂಡಳಿಯಲ್ಲಿ ನಡೆಯುತ್ತಿರುವ ಸ್ವ ಹಿತಾಸಕ್ತಿ ಹುದ್ದೆಯ ಸಂಘರ್ಷ, ಒಳರಾಜಕೀಯದಿಂದಾಗಿ ಇಂಜಮಾಮ್ ಸ್ಥಾನ ತ್ಯಾಗ ಮಾಡಿದ್ದಾರೆ. ಇದೀಗ ವಿಶ್ವಕಪ್ ಬಳಿಕ ಬಾಬರ್ ಅಜಮ್ ಕೂಡಾ ನಾಯಕತ್ವ ಕಳೆದುಕೊಳ್ಳಲಿದ್ದಾರೆ ಎಂಬ ಸುದ್ದಿಯಿದೆ.

ಪಾಕಿಸ್ತಾನ ತಂಡದ ಹೀನಾಯ ಪ್ರದರ್ಶನಕ್ಕೆ ಪಾಕ್ ಕ್ರಿಕೆಟ್ ಮಂಡಳಿಯ ಒಳರಾಜಕೀಯವೂ ಕಾರಣ ಎಂದು ಆರೋಪಗಳು ಕೇಳಿಬಂದಿದ್ದವು. ಪಾಕಿಸ್ತಾನ ಕ್ರಿಕೆಟ್ ಕಂಡ ಯಶಸ್ವೀ ಆಟಗಾರ, ನಾಯಕ ಎಂಬ ಖ್ಯಾತಿ ಇಂಜಮಾಮ್ ರದ್ದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀಲಂಕಾ ವಿರುದ್ಧದ ಪಂದ್ಯಕ್ಕೆ ಮುಂಬೈಗೆ ಬಂದಿಳಿದ ಟೀಂ ಇಂಡಿಯಾ