ಐಪಿಎಲ್ 2022 ಕ್ಕೆ ಇಂದು ಚಾಲನೆ: ಚೆನ್ನೈ-ಕೆಕೆಆರ್ ನಡುವೆ ಮೊದಲ ಪಂದ್ಯ

Webdunia
ಶನಿವಾರ, 26 ಮಾರ್ಚ್ 2022 (08:40 IST)
ಮುಂಬೈ: ವಿಶ್ವದ ಶ್ರೀಮಂತ ಕ್ರೀಡಾಕೂಟ ಎಂಬ ಖ್ಯಾತಿಯಲ್ಲಿರುವ ಐಪಿಎಲ್ 2022 ಕ್ಕೆ ಇಂದು ಅಧಿಕೃತ ಚಾಲನೆ ಸಿಗಲಿದೆ.

ಮೊದಲ ಪಂದ್ಯದಲ್ಲಿ ಇಂದು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್ ಸೆಣಸಾಟ ನಡೆಸಲಿವೆ. ಈ ಕೂಟದಲ್ಲಿ ಸಿಎಸ್ ಕೆಗೆ ರವೀಂದ್ರ ಜಡೇಜಾ ನೇತೃತ್ವ ವಹಿಸಲಿದ್ದಾರೆ. ನಾಯಕರಾಗಿ ಅವರಿಗೆ ಇದು ಮೊದಲ ಅನುಭವ. ಜೊತೆಗೆ ಧೋನಿ ಉತ್ತರಾಧಿಕಾರಿಯಾಗಿ ತಂಡದ ಯಶಸ್ಸು ಮುಂದುವರಿಸುವ ಜವಾಬ್ಧಾರಿ ಅವರ ಮೇಲಿದೆ.

ಅತ್ತ ಕೆಕೆಆರ್ ಕಳೆದ ಬಾರಿ ಅದ್ಭುತ ಪ್ರದರ್ಶನ ನೀಡಿತ್ತು. ಆದರೆ ಈ ಬಾರಿ ಹೊಸ ನಾಯಕ ಶ್ರೇಯಸ್ ಅಯ್ಯರ್ ನೇತೃತ್ವದಲ್ಲಿ ಕಣಕ್ಕಿಳಿಯಲಿದೆ. ಶ್ರೇಯಸ್ ಗೆ ಈ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ನಾಯಕರಾಗಿ ಉತ್ತಮವಾಗಿ ತಂಡವನ್ನು ಮುನ್ನಡೆಸಿದ ಅನುಭವವಿದೆ. ಹೀಗಾಗಿ ಇಲ್ಲಿಯೂ ಅದೇ ಪ್ರದರ್ಶನ ಕಾಯ್ದುಕೊಳ್ಳಬಹುದು ಎಂಬ ವಿಶ್ವಾಸವಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಪಿಎಲ್ 2026 ಪಂದ್ಯಗಳನ್ನು ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಎರಡನೇ ಮದುವೆಗೆ ಸಿದ್ಧರಾದ ಕ್ರಿಕೆಟಿಗ ಶಿಖರ್ ಧವನ್: ಮತ್ತೆ ವಿದೇಶೀ ಬೆಡಗಿ ವಧು

ಡಬ್ಲ್ಯುಪಿಎಲ್ 2026: ಆರ್ ಸಿಬಿ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ಕೆಕೆಆರ್‌ನಿಂದ ಮುಸ್ತಾಫಿಜುರ್ ರೆಹಮಾನ್ ಔಟ್‌: ಬಾಂಗ್ಲಾದೇಶದಲ್ಲಿ ಐಪಿಎಲ್‌ ನಿಷೇಧ

ನಾಳೆಯಿಂದ ಮತ್ತೆ ವಿಜಯ್ ಹಜಾರೆ ಟ್ರೋಫಿ: ಕೊಹ್ಲಿ, ರೋಹಿತ್ ಆಡ್ತಾರಾ ಎನ್ನುವುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments