ಚೆನ್ನೈ: ಐಪಿಎಲ್ 2023 ರಲ್ಲಿ ಇಂದು ಚಾಂಪಿಯನ್ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಇಂದಿನ ಪಂದ್ಯ ನಡೆಯಲಿದೆ.
ರೋಹಿತ್ ಶರ್ಮಾ ಪಡೆ ಕಳೆದ ಎರಡು ಪಂದ್ಯಗಳ ಸತತ ಗೆಲುವು ಸಾಧಿಸಿದೆ. ಅದರಲ್ಲೂ 200 ಪ್ಲಸ್ ರನ್ ಗಳಿಸಿ ಬ್ಯಾಟಿಂಗ್ ಸಾಮರ್ಥ್ಯ ಸಾಬೀತುಪಡಿಸಿದೆ. ಆದರೆ ನಾಯಕ ರೋಹಿತ್ ಶರ್ಮಾ ರನ್ ಗಳಿಸಬೇಕಿದೆ. ಇದುವರೆಗೆ ಆಡಿದ 9 ಪಂದ್ಯಗಳ ಪೈಕಿ ಮುಂಬೈ 5 ರಲ್ಲಿ ಗೆಲುವು ಸಾಧಿಸಿದೆ.
ಇನ್ನೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡ 10 ಪಂದ್ಯಗಳಿಂದ 5 ರಲ್ಲಿ ಗೆಲುವು ಸಾಧಿಸಿದೆ. ಕಳೆದ ಮೂರು ಪಂದ್ಯಗಳಲ್ಲಿ 2 ಗೆಲುವು ಅದಾದ ಬಳಿಕ ಒಂದು ಪಂದ್ಯ ಫಲಿತಾಂಶವಿಲ್ಲದೇ ಅಂತ್ಯವಾಗಿತ್ತು. ಹೀಗಾಗಿ ಸಿಎಸ್ ಕೆಗೆ ಗೆಲುವು ಅನಿವಾರ್ಯವಾಗಿದೆ. ಈ ಪಂದ್ಯ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.