Publish Date: Wed, 05 Apr 2023 (08:10 IST)
Updated Date: Wed, 05 Apr 2023 (08:27 IST)
ನವದೆಹಲಿ: ಐಪಿಎಲ್ 2023 ರಲ್ಲಿ ಸರ್ವಾಂಗೀಣ ವೈಫಲ್ಯ ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸತತ ಎರಡನೇ ಸೋಲು ಕಂಡಿದೆ. ಗುಜರಾತ್ 6 ವಿಕೆಟ್ ಗಳ ಗೆಲುವು ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು. ಡೇವಿಡ್ ವಾರ್ನರ್ 37, ಸರ್ಫರಾಜ್ ಖಾನ್ 30, ಅಕ್ಸರ್ ಪಟೇಲ್ 36 ರನ್ ಗಳಿಸಿದರು.
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಹಾಲಿ ಚಾಂಪಿಯನ್ ಗುಜರಾತ್ ಸಾಯ್ ಸುದರ್ಶನ್ ಅರ್ಧಶತಕ (62), ಡೇವಿಡ್ ಮಿಲ್ಲರ್ ಸ್ಪೋಟಕ ಬ್ಯಾಟಿಂಗ್ (31) ನಿಂದಾಗಿ 18.1 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 163 ರನ್ ಗಳಿಸುವ ಮೂಲಕ ಕೂಟದಲ್ಲಿ ಸತತ ಎರಡನೇ ಗೆಲುವು ದಾಖಲಿಸಿತು.