Select Your Language

Notifications

webdunia
webdunia
webdunia
webdunia

ಐಪಿಎಲ್ 2023: ಗುಜರಾತ್-ಲಕ್ನೋ ಮುಖಾಮುಖಿ

ಐಪಿಎಲ್ 2023: ಗುಜರಾತ್-ಲಕ್ನೋ ಮುಖಾಮುಖಿ
ಅಹಮ್ಮದಾಬಾದ್ , ಭಾನುವಾರ, 7 ಮೇ 2023 (06:40 IST)
ಅಹಮ್ಮದಾಬಾದ್: ಐಪಿಎಲ್ 2023 ರಲ್ಲಿ ಇಂದು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಪರಸ್ಪರ ಮುಖಾಮುಖಿಯಾಗಲಿದೆ.

ಲಕ್ನೋ ಸೂಪರ್ ಜೈಂಟ್ಸ್ ಗೆ ಈಗಾಗಲೇ ನಾಯಕ ಕೆಎಲ್ ರಾಹುಲ್ ಅನುಪಸ್ಥಿತಿ ಕಾಡಲಿದೆ. ಅವರ ಸ್ಥಾನಕ್ಕೆ ಕನ್ನಡಿಗ ಕರುಣ್ ನಾಯರ್ ಗೆ ಅವಕಾಶ ಸಿಕ್ಕಿದೆ. ಆದರೆ ಅವರು ಆಡುವ ಬಳಗದಲ್ಲಿ ಸ್ಥಾನ ಪಡೆಯುತ್ತಾರಾ ಕಾದು ನೋಡಬೇಕಿದೆ. ಸದ್ಯಕ್ಕೆ 10 ಪಂದ್ಯಗಳಿಂದ 5 ಗೆಲುವು ಸಂಪಾದಿಸಿರುವ ಲಕ್ನೋ 6 ನೇ ಗೆಲುವಿನ ನಿರೀಕ್ಷೆಯಲ್ಲಿದೆ.

ಅತ್ತ ಗುಜರಾತ್ ಟೈಟನ್ಸ್ 10 ಪಂದ್ಯಗಳಿಂದ 7 ಗೆಲುವು ಸಾಧಿಸಿ ಅಗ್ರಸ್ಥಾನದಲ್ಲಿದೆ. ಹಾರ್ದಿಕ್ ಪಡೆ ಕಳೆದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು. ಅದೇ ಪ್ರದರ್ಶನ ಕಾಯ್ದುಕೊಳ್ಳುವ ನಿರೀಕ್ಷೆಯಲ್ಲಿದೆ. ಈ ಪಂದ್ಯ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2023: ವೈಮನಸ್ಯ ಮರೆತು ಒಂದಾದ ಕೊಹ್ಲಿ-ಗಂಗೂಲಿ