ಲಕ್ನೋ: ಐಪಿಎಲ್ 2023 ರಲ್ಲಿ ಮೊದಲ ಗೆಲುವಿನ ಹುಡುಕಾಟದಲ್ಲಿರುವ ಸನ್ ರೈಸರ್ಸ್ ಹೈದರಾಬಾದ್ ಇಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂದ್ಯವಾಡಲಿದೆ.
ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಇದುವರೆಗೆ ಎರಡು ಪಂದ್ಯವಾಡಿದ್ದು, ಇದರಲ್ಲಿ ಒಂದು ಗೆಲುವು, ಒಂದು ಸೋಲು ಕಂಡಿದೆ. ಲಕ್ನೋ ಪರ ಕೆಎಲ್ ರಾಹುಲ್, ದೀಪಕ್ ಹೂಡಾ ಖ್ಯಾತಿಗೆ ತಕ್ಕ ಆಟವಾಡಬೇಕಿದೆ.
ಅತ್ತ ಸನ್ ರೈಸರ್ಸ್ ಹೈದರಾಬಾದ್ ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿತ್ತು. ಬೌಲಿಂಗ್ ಕೂಡಾ ಸುಧಾರಿಸಬೇಕಿದೆ. ಹೀಗಾಗಿ ಕಳೆದ ಪಂದ್ಯದಲ್ಲಿ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಂಡು ಗೆಲುವು ಕಾಣಬೇಕಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗುವುದು.