Publish Date: Tue, 16 May 2023 (07:50 IST)
Updated Date: Tue, 16 May 2023 (08:11 IST)
ಲಕ್ನೋ: ಐಪಿಎಲ್ 2023 ರಲ್ಲಿ ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಪಂದ್ಯ ನಡೆಯಲಿದೆ.
ವಿವಾದಗಳಿಂದಲೇ ಸುದ್ದಿಯಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಕಳೆದ ಪಂದ್ಯದಲ್ಲಿ ಗೆಲುವು ಸಾಧಿಸಿತ್ತು. ನಾಯಕ ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಕೃನಾಲ್ ಪಾಂಡ್ಯ ತಂಡ ಮುನ್ನಡೆಸುತ್ತಿದ್ದಾರೆ. ಆಡಿದ 12 ಪಂದ್ಯಗಳ ಪೈಕಿ 6 ರಲ್ಲಿ ಗೆಲುವು ಸಾಧಿಸಿದೆ.
ಆದರೆ ಮುಂಬೈ ಇದೀಗ ಅತ್ಯುತ್ತಮ ಫಾರ್ಮ್ ನಲ್ಲಿದ್ದು, ಸತತ ಎರಡು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. 12 ಪಂದ್ಯಗಳ ಪೈಕಿ ಮುಂಬೈ 7 ರಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ತೀವ್ರ ಪೈಪೋಟಿ ನಿರೀಕ್ಷಿಸಬಹುದು. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗುವುದು.