ಹೈದರಾಬಾದ್: ಐಪಿಎಲ್ ನಲ್ಲಿ ಇಂದು ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ಪಂದ್ಯ ನಡೆಯಲಿದೆ.
ಮುಂಬೈ ಇಂಡಿಯನ್ಸ್ ಆರಂಭಿಕ ಎರಡು ಸೋಲುಗಳ ನಂತರ ಚೇತರಿಸಿಕೊಂಡು ಕಳೆದ ಎರಡು ಪಂದ್ಯಗಳಿಂದ ಸತತ ಗೆಲುವು ಸಾಧಿಸಿದೆ. ನಾಯಕ ರೋಹಿತ್ ಶರ್ಮಾ ಕಳೆದ ಪಂದ್ಯದಲ್ಲಿ ಹೊಟ್ಟೆ ನೋವಿನ ಸಮಸ್ಯೆಯಿಂದಾಗಿ ಕೇವಲ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದರು. ಈ ಪಂದ್ಯಕ್ಕೆ ಅವರು ಪೂರ್ಣಪ್ರಮಾಣದಲ್ಲಿ ಕಣಕ್ಕಿಳಿಯುವ ನಿರೀಕ್ಷೆಯಿದೆ.
ಇನ್ನೊಂದೆಡೆ ಸನ್ ರೈಸರ್ಸ್ ಹೈದರಾಬಾದ್ ನದ್ದೂ ಅದೇ ಕತೆ. ಆರಂಭಿಕ ಎರಡು ಪಂದ್ಯಗಳನ್ನು ಸೋತ ಹೈದರಾಬಾದ್ ಕಳೆದ ಎರಡು ಪಂದ್ಯಗಳನ್ನು ಗೆದ್ದುಕೊಂಡಿದೆ. ಸ್ವತಃ ನಾಯಕ ಆಡನ್ ಮಾರ್ಕರನ್ ಫಾರ್ಮ್ ಪ್ರದರ್ಶಿಸಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿ ಪೈಪೋಟಿ ನಿರೀಕ್ಷಿಸಬಹುದು. ಈ ಪಂದ್ಯ ಸಂಜೆ 7.30 ಕ್ಕೆ ನಡೆಯಲಿದೆ.