Publish Date: Sat, 15 Apr 2023 (08:30 IST)
Updated Date: Sat, 15 Apr 2023 (08:43 IST)
ಲಕ್ನೋ: ಐಪಿಎಲ್ 2023 ರಲ್ಲಿ ಇಂದು ಎರಡನೆಯ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ಪಂದ್ಯ ನಡೆಯಲಿದೆ.
ಕಿಂಗ್ಸ್ ಇಲೆವೆನ್ ಕಳೆದ ಎರಡು ಪಂದ್ಯಗಳಲ್ಲಿ ಸತತ ಸೋಲು ಅನುಭವಿಸಿದೆ. ಆರಂಭದಲ್ಲಿ ಬ್ಯಾಟಿಂಗ್ ಅಬ್ಬರದಲ್ಲಿತ್ತು. ಆದರೆ ಕಳೆದ ಎರಡು ಪಂದ್ಯಗಳಲ್ಲಿ ಬ್ಯಾಟಿಂಗ್ ಕೈ ಕೊಟ್ಟಿದೆ. ಇದು ಸುಧಾರಿಸಬೇಕಿದೆ.
ಇನ್ನು, ಲಕ್ನೋ ಕಳೆದ ಎರಡು ಪಂದ್ಯಗಳಲ್ಲಿ ಸತತ ಎರಡು ಗೆಲುವಿನೊಂದಿಗೆ ಆತ್ಮವಿಶ್ವಾಸದಲ್ಲಿದೆ. ಲಕ್ನೋ ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ಮೇಲುಗೈ ಸಾಧಿಸಿದೆ. ಹೀಗಾಗಿ ಅದೇ ಪ್ರದರ್ಶನ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗುವುದು.