Webdunia - Bharat's app for daily news and videos

Install App

ಐಪಿಎಲ್ 2023: ಸೂರ್ಯ ಎದುರು ಕಳೆಗುಂದಿದ ಆರ್ ಸಿಬಿ

Webdunia
ಬುಧವಾರ, 10 ಮೇ 2023 (06:40 IST)
ಮುಂಬೈ: ಐಪಿಎಲ್ 2023 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಂದು ಸೋಲು ಕಂಡಿದೆ.  ಮುಂಬೈ ಎದುರು 6 ವಿಕೆಟ್ ಗಳ ಸೋಲು ಅನುಭವಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿಗೆ ಎಂದಿನಂತೇ ಕೈ ಹಿಡಿದಿದ್ದ ಗ್ಲೆನ್ ಮ್ಯಾಕ್ಸ್ ವೆಲ್-ಫಾ ಡು ಪ್ಲೆಸಿಸ್ ಜೋಡಿ ಇಬ್ಬರೂ ಶತಕದ ಜೊತೆಯಾಟವಾಡಿದ್ದರಿಂದ ಆರ್ ಸಿಬಿ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಲು ಸಾಧ‍್ಯವಾಯಿತು. ಮ್ಯಾಕ್ಸಿ 68, ಫಾ ಡು ಪ್ಲೆಸಿಸ್ 65 ರನ್ ಗಳಿಸಿತು. ಆದರೆ ಇವರಿಬ್ಬರ ವಿಕೆಟ್ ಬಿದ್ದ ಮೇಲೆ ಕೊನೆಯ 7 ಓವರ್ ಗಳಲ್ಲಿ ಆರ್ ಸಿಬಿ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ್ದರಿಂದ 20-30 ರನ್ ಕಡಿಮೆಯಾಯಿತು.

ಈ ಮೊತ್ತ ಬೆನ್ನತ್ತಿದ ಮುಂಬೈ ಇಶಾನ್ ಕಿಶನ್ ಸ್ಪೋಟಕ ಆರಂಭ ನೀಡಿದರು. ಅವರು 42 ರನ್ ಗಳಿಸಿದರು. ಆದರೆ ನಾಯಕ ರೋಹಿತ್ ಶರ್ಮಾ ಮತ್ತೆ ವೈಫಲ್ಯಕ್ಕೊಳಗಾಗಿ 7 ರನ್ ಗೆ ವಿಕೆಟ್ ಒಪ್ಪಿಸಿದರು. ಆದರೆ ಸೂರ್ಯಕುಮಾರ್ ಯಾದವ್ ಬಿರುಸಿನ ಆಟವಾಡಿ 35 ಎಸೆತಗಳಿಂದ 83 ರನ್ ಗಳಿಸುವ ಮೂಲಕ ಮುಂಬೈ ಗೆಲುವು ಸುಲಭವಾಗಿಸಿದರು.  ಅವರಿಗೆ ತಕ್ಕ ಸಾಥ್ ನೀಡಿದ ನೇಹಲ್ ವಧೇರಾ ಅಜೇಯ 52 ರನ್ ಗಳಿಸಿದರು. ಇದರೊಂದಿಗೆ ಮುಂಬೈ 16.3 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿ ಗೆಲುವು  ಕಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ಮುಂದಿನ ಸುದ್ದಿ
Show comments