Webdunia - Bharat's app for daily news and videos

Install App

ಐಪಿಎಲ್ 2023: ಕಿಂಗ್ ಕೊಹ್ಲಿ ಶತಕಕ್ಕೆ ಪ್ರಿನ್ಸ್ ಗಿಲ್ ಠಕ್ಕರ್

Webdunia
ಸೋಮವಾರ, 22 ಮೇ 2023 (08:10 IST)
Photo Courtesy: Twitter
ಬೆಂಗಳೂರು: ಐಪಿಎಲ್ 2023 ರಲ್ಲಿ ಪ್ಲೇ ಆಫ್ ಹಂತಕ್ಕೇರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕನಸು ಭಗ್ನಗೊಂಡಿದೆ. ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಮಾಡು ಇಲ್ಲವೇ ಮಡಿ ಪಂದ್ಯವನ್ನು ಆರ್ ಸಿಬಿ 6 ವಿಕೆಟ್ ಗಳಿಂದ ಸೋತಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 197 ರನ್ ಗಳಿಸಿತು. ಆರ್ ಸಿಬಿ ಪರ ಮತ್ತೆ ಕಿಂಗ್ ಕೊಹ್ಲಿ ಸಿಡಿದೆದ್ದು ಈ ಐಪಿಎಲ್ ನಲ್ಲಿ ಸತತ ಎರಡನೇ ಶತಕ ಸಿಡಿಸಿದರು. ಒಟ್ಟು 61 ಎಸೆತ ಎದುರಿಸಿದ ಅವರು 101 ರನ್ ಗಳಿಸಿ ಅಜೇಯರಾಗುಳಿದರು. ಇದು ಐಪಿಎಲ್ ನಲ್ಲಿ ಅವರ 7 ನೇ ಶತಕವಾಗಿತ್ತು. ಈ ಮೂಲಕ ಐಪಿಎಲ್ ನಲ್ಲಿ ಅತ್ಯಧಿಕ ಶತಕ ಗಳಿಸಿದ ದಾಖಲೆ ಮಾಡಿದರು.

ಆದರೆ ಕೊಹ್ಲಿಯ ಭರ್ಜರಿ ಇನಿಂಗ್ಸ್ ಹೊರತಾಗಿಯೂ ಆರ್ ಸಿಬಿ ಬೌಲರ್ ಗಳು ಗುಜರಾತ್ ಗೆ ಕಡಿವಾಣ ಹಾಕಲು ವಿಫಲರಾದರು. ಕಿಂಗ್ ಕೊಹ್ಲಿಯ ಶತಕಕ್ಕೆ ಠಕ್ಕರ್ ಕೊಟ್ಟ ಗುಜರಾತ್ ನ ಪ್ರಿನ್ಸ್ ಶುಬ್ಮನ್ ಗಿಲ್ ಕೇವಲ 52 ಎಸೆತಗಳಿಂದ 8 ಸಿಕ್ಸರ್ ಸಹಿತ ಅಜೇಯ 104 ರನ್ ಸಿಡಿಸಿ ತಂಡದ ಗೆಲುವಿಗೆ ಕಾರಣರಾದರು. ಅವರಿಗೆ ತಕ್ಕ ಸಾಥ್ ನೀಡಿದ ವಿಜಯ್ ಶಂಕರ್ 53 ರನ್ ಗಳ ಕೊಡುಗೆ ನೀಡಿದರು. ಇದರೊಂದಿಗೆ ಗುಜರಾತ್ 19.1 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 198 ರನ್ ಗಳಿಸುವ ಮೂಲಕ ಗೆಲುವು ಸಾಧಿಸಿ ಆರ್ ಸಿಬಿಯನ್ನು ಟೂರ್ನಿಯಿಂದ ಹೊರದಬ್ಬಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments