ಕೋಲ್ಕೊತ್ತಾ: ಐಪಿಎಲ್ 2023 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಪಂದ್ಯದಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ಪಂದ್ಯವಾಡಲಿದೆ.
ಮೊದಲ ಪಂದ್ಯದಲ್ಲಿ ಆರ್ ಸಿಬಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತ್ತು. ಆರ್ ಸಿಬಿ ತ್ರಿಮೂರ್ತಿಗಳಾದ ವಿರಾಟ್ ಕೊಹ್ಲಿ, ಫಾ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ ವೆಲ್ ಮಿಂಚಿದ್ದರು. ಹೀಗಾಗಿ ಇಂದು ಆರ್ ಸಿಬಿ ಗೆಲ್ಲುವ ಫೇವರಿಟ್ ತಂಡವಾಗಿದೆ.
ಅತ್ತ ಕೆಕೆಆರ್ ತಂಡ ಶ್ರೇಯಸ್ ಅಯ್ಯರ್ ಇಲ್ಲದೇ ಕಳೆಗುಂದಿದೆ. ಜೊತೆಗೆ ಹಿರಿಯ ಆಟಗಾರ ಶಕೀಬ್ ಅಲ್ ಹಸನ್ ಕೂಡಾ ಹೊರಬಿದ್ದಿದ್ದಾರೆ. ಹೀಗಾಗಿ ಇವರೆಲ್ಲರ ಅನುಪಸ್ಥಿತಿಯಲ್ಲಿ ಕೆಕೆಆರ್ ತಂಡ ಮತ್ತೆ ಸಿಡಿದೇಳಲೇಬೇಕಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.