Select Your Language

Notifications

webdunia
webdunia
webdunia
webdunia

ಐಪಿಎಲ್ 2024: ಮುಂಬೈ ಇಂಡಿಯನ್ಸ್ ಗೆ ಇಂದು ಡೆಲ್ಲಿ ಕ್ಯಾಪಿಟಲ್ಸ್ ಸವಾಲು

Hardik Pandya

Krishnaveni K

ದೆಹಲಿ , ಶನಿವಾರ, 27 ಏಪ್ರಿಲ್ 2024 (10:34 IST)
ದೆಹಲಿ: ಐಪಿಎಲ್ 2024 ರಲ್ಲಿ ಇಂದು ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಪ್ಲೇ ಆಫ್ ಹಾದಿಯನ್ನು ಗಮನದಲ್ಲಿಟ್ಟುಕೊಂಡು ಇಂದಿನ ಪಂದ್ಯದಲ್ಲಿ ಭರ್ಜರಿ ಅಂತರದಲ್ಲಿ ಗೆಲುವು ಸಾಧಿಸಲೇಬೇಕಾಗಿದೆ. ಯಾಕೆಂದರೆ ಒಟ್ಟು 9 ಪಂದ್ಯವಾಡಿರುವ ಡೆಲ್ಲಿ 4 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 6 ನೇ ಸ್ಥಾನದಲ್ಲಿದೆ. ಸದ್ಯಕ್ಕೆ ಡೆಲ್ಲಿಗೆ ಅಂಕಪಟ್ಟಿಯಲ್ಲಿ ಟಾಪ್ 5 ರೊಳಗೆ ಸ್ಥಾನ ಪಡೆಯುವ ಅನಿವಾರ್ಯತೆಯಿದೆ.

ಕಳೆದ ಪಂದ್ಯದಲ್ಲಿ ರಿಷಬ್ ಪಂತ್ ಆಡಿರುವುದು ಡೆಲ್ಲಿ ಉತ್ಸಾಹ ಹೆಚ್ಚಿಸಿರುತ್ತದೆ. ಇದರ ಜೊತೆಗೆ ಅಕ್ಸರ್ ಪಟೇಲ್ ಕೂಡಾ ಬೌಲಿಂಗ್ ಜೊತೆಗೆ ಬ್ಯಾಟಿಂಗ್ ನಲ್ಲೂ ಉಪಯುಕ್ತ ಕಾಣಿಕೆ ನೀಡುತ್ತಿದ್ದಾರೆ. ಕುಲದೀಪ್ ಯಾದವ್ ಪ್ರಮುಖ ಸ್ಪಿನ್ ಅಸ್ತ್ರವಾಗಿದ್ದಾರೆ.

ಇನ್ನೊಂದೆಡೆ ಮುಂಬೈ ಇಂಡಿಯನ್ಸ್ ಕಳೆದ ಪಂದ್ಯದಲ್ಲಿ ಸೋಲು ಅನುಭವಿಸಿತ್ತು. ಒಟ್ಟು 8 ಪಂದ್ಯಗಳನ್ನಾಡಿರುವ ಮುಂಬೈ 3 ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ 8 ನೇ ಸ್ಥಾನದಲ್ಲಿದೆ. ಸದ್ಯಕ್ಕೆ ಮುಂಬೈಗೆ ಪ್ಲೇ ಆಫ್ ಆಸೆ ಕ್ಷೀಣವಾಗಿದೆ. ಹಾಗಿದ್ದರೂ ಹಿಟ್ ಮ್ಯಾನ್ ರೋಹಿತ್ ಶರ್ಮಾ ಬ್ಯಾಟಿಂಗ್ ನೋಡಲೆಂದೇ ಅಭಿಮಾನಿಗಳು ಮೈದಾನಕ್ಕೆ ಬರಲಿದ್ದಾರೆ. ಈ ಪಂದ್ಯ ಅಪರಾಹ್ನ 3.30ಕ್ಕೆ ಆರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2024: ಐತಿಹಾಸಿಕ ರನ್ ಚೇಸ್ ಮಾಡಿದ ಪಂಜಾಬ್ ಕಿಂಗ್ಸ್