Webdunia - Bharat's app for daily news and videos

Install App

ಐಪಿಎಲ್ 2024: ಕೊನೆಗೂ ಮುಂಬೈ ತಂಡಕ್ಕೆ ಬರ್ತಿದ್ದಾರೆ ಸೂರ್ಯಕುಮಾರ್ ಯಾದವ್

Krishnaveni K
ಶನಿವಾರ, 6 ಏಪ್ರಿಲ್ 2024 (11:35 IST)
ಮುಂಬೈ: ಐಪಿಎಲ್ 2024 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ಗೆ ಈಗ ಖುಷಿಯ ಸಮಾಚಾರವೊಂದು ಸಿಕ್ಕಿದೆ.

ತಂಡದ ಪ್ರಮುಖ ಆಟಗಾರ ಸೂರ್ಯಕುಮಾರ್ ಯಾದವ್ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಈ ವಿಚಾರವನ್ನು ಮುಂಬೈ ತಂಡವೇ ಘೋಷಿಸಿದೆ. ಕಳೆದ ಮೂರು ಪಂದ್ಯಗಳ ಪೈಕಿ ಮುಂಬೈ ಇಂಡಿಯನ್ಸ್ ಮೂರೂ ಪಂದ್ಯಗಳನ್ನೂ ಸೋತು ಅಭಿಮಾನಿಗಳಿಂದ ಭಾರೀ ಟೀಕೆಗೊಳಗಾಗಿದೆ.

ಹಾರ್ದಿಕ್ ಪಾಂಡ್ಯ ನಾಯಕರಾದ ಮೇಲೆ ತಂಡದ ಅದೃಷ್ಟವೇ ಕೈಕೊಟ್ಟಿದೆ ಎಂದು ನೆಟ್ಟಿಗರು ಜರೆಯುತ್ತಿದ್ದಾರೆ. ಈ ನಡುವೆ ಸೂರ್ಯಕುಮಾರ್ ಕಮ್ ಬ್ಯಾಕ್ ಮಾಡುತ್ತಿರುವುದು ಅಭಿಮಾನಿಗಳ ಸಮಾಧಾನಕ್ಕೆ ಕಾರಣವಾಗಿದೆ. ಟಿ20 ಸ್ಪೆಷಲಿಸ್ಟ್ ಬ್ಯಾಟಿಗ ಮುಂಬೈ ತಂಡಕ್ಕೆ ಮಧ್ಯಮ ಕ್ರಮಾಂಕದಲ್ಲಿ ಬಲ ತುಂಬಬಲ್ಲರು.

ಹರ್ನಿಯಾ ಆಪರೇಷನ್ ಗೊಳಗಾಗಿದ್ದ ಸೂರ್ಯಕುಮಾರ್ ಯಾದವ್ ಪೂರ್ಣ ಫಿಟ್ ಆಗದೇ ಇರುವುದರಿಂದ ಮೊದಲ ಮೂರು ಪಂದ್ಯಗಳಿಗೆ ಅಲಭ್ಯರಾಗಿದ್ದರು. ಈ ವೇಳೆ ಅವರು ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ಫಿಟ್ನೆಸ್ ಸರ್ಟಿಫಿಕೇಟ್ ಪಡೆದಿದ್ದು ನಾಳೆ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಪರ ಆಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಟೀಂ ಇಂಡಿಯಾಗೆ ಬಿಗ್ ಶಾಕ್, ರಿಷಭ್ ಪಂತ್ ಸರಣಿಯಿಂದಲೇ ಔಟ್

ಬ್ರೇಕ್ ನಲ್ಲೂ ಪೆವಿಲಿಯನ್ ನಲ್ಲಿ ಸಾಯಿ ಸುದರ್ಶನ್ ಗೆ ಇದೆಂಥಾ ಅಭ್ಯಾಸ

ಕರುಣ್ ನಾಯರ್ ವೃತ್ತಿ ಜೀವನ ಇಲ್ಲಿಗೇ ಕೊನೆಯಾಯ್ತಾ

Rishabh Pant: ಚೆಂಡು ಬಡಿದ ರಭಸಕ್ಕೆ ರಿಷಭ್ ಪಂತ್ ಪಾದದ ಗತಿ ಏನಾಗಿದೆ ನೋಡಿ: ವಿಡಿಯೋ

ಭಾರತ–ಇಂಗ್ಲೆಂಡ್‌ ಟೆಸ್ಟ್‌: ದಾಖಲೆ ಬರೆದ ಕೆಲವೇ ಕ್ಷಣದಲ್ಲಿ ಗಾಯಗೊಂಡು ಮೈದಾನ ತೆರೆದ ರಿಷಭ್‌ ಪಂತ್‌

ಮುಂದಿನ ಸುದ್ದಿ
Show comments