ಐಪಿಎಲ್ 2024: ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಇಂದಾದರೂ ಸಿಗುತ್ತಾ ಗೆಲುವು

Krishnaveni K
ಶನಿವಾರ, 6 ಏಪ್ರಿಲ್ 2024 (10:43 IST)
ಇಂಧೋರ್: ಐಪಿಎಲ್ 2024 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಸೋಲೇ ಕಾಣದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತವಾಗಿ ಕಳೆದ ಎರಡು ಪಂದ್ಯಗಳನ್ನು ಸೋತಿತ್ತು. ಹೀಗಾಗಿ ಆಟಗಾರರ ಪ್ರದರ್ಶನದ ಬಗ್ಗೆ ತೀವ್ರ ಟೀಕೆ ಕೇಳಿಬರುತ್ತಿದೆ. ಅದರಲ್ಲೂ ಫಾ ಡು ಪ್ಲೆಸಿಸ್ ನಾಯಕತ್ವದ ಬಗ್ಗೆ ಪ್ರಶ್ನೆ ಮೂಡಿದೆ. ಜೊತೆಗೆ ಇತರೆ ಬ್ಯಾಟಿಗರ ನಿಧಾನಗತಿಯ ಬ್ಯಾಟಿಂಗ್, ಬೌಲರ್ ಗಳ ಬಳಕೆ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ.

ಒಂದೆಡೆ ಬೌಲಿಂಗ್ ಕ್ಲಿಕ್ ಆಗುತ್ತಿಲ್ಲ. ಇನ್ನೊಂದೆಡೆ ಘಟಾನುಘಟಿ ಬ್ಯಾಟಿಗರು ಸಂಘಟಿತ ಪ್ರದರ್ಶನ ನೀಡುತ್ತಿಲ್ಲ. ಆರ್ ಸಿಬಿ ಮುಖ್ಯವಾಗಿ ವಿರಾಟ್ ಕೊಹ್ಲಿ ಮೇಲೆ ಅತಿಯಾಗಿ ಅವಲಂಬಿತವಾಗಿದೆ. ಆದರೆ ಅವರಿಗೆ ಸಾಥ್ ಕೊಡುವವರು ಯಾರೂ ಇಲ್ಲ ಎಂಬಂತಾಗಿದೆ.

ಆದರೆ ಇತ್ತ ರಾಜಸ್ಥಾನ್‍ ಕತೆ ಹಾಗಲ್ಲ. ಕಳೆದ ಮೂರು ಪಂದ್ಯಗಳ ಪೈಕಿ ಮೂರರನ್ನು ಗೆಲ್ಲಲು ಸಂಜು ಸ್ಯಾಮ್ಸನ್ ನಾಯಕತ್ವ ಮತ್ತು ಅವರು ಬೌಲಿಂಗ್ ಪಡೆಯನ್ನು ಬಳಸಿಕೊಳ್ಳುತ್ತಿರುವ ರೀತಿ ಪ್ರಮುಖ ಕಾರಣವಾಗಿದೆ. ಆದರೆ ಈ ಗೆಲುವು ಆರಂಭಕ್ಕೆ ಮಾತ್ರ ಸೀಮಿತವಾಗದಿರಲಿ ಎನ್ನುವುದು ಫ್ಯಾನ್ಸ್ ಅಭಿಲಾಷೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments