Select Your Language

Notifications

webdunia
webdunia
webdunia
webdunia

ಐಪಿಎಲ್ 2024: ರಾಜಸ್ಥಾನ್ ರಾಯಲ್ಸ್ ವಿರುದ್ಧ ಎಲಿಮಿನೇಟರ್ ಪಂದ್ಯ ಗೆದ್ದು ಬಾ ಆರ್ ಸಿಬಿ

RCB

Krishnaveni K

ಅಹಮ್ಮದಾಬಾದ್ , ಬುಧವಾರ, 22 ಮೇ 2024 (10:03 IST)
ಅಹಮ್ಮದಾಬಾದ್: ಐಪಿಎಲ್ 2024 ರಲ್ಲಿ ಇಂದು ಮತ್ತೊಮ್ಮೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಕುತೂಹಲದಿಂದ ಎದಿರು ನೋಡುತ್ತಿರುವ ದಿನವಾಗಿದೆ. ಇಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್ ಸಿಬಿ ಎಲಿಮಿನೇಟರ್ ಪಂದ್ಯವಾಡಲಿದೆ.

ಇಂದಿನ ಪಂದ್ಯದಲ್ಲಿ ಗೆದ್ದ ತಂಡ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಲಿದೆ. ಸೋತ ತಂಡ ನೇರವಾಗಿ ಟೂರ್ನಿಯಿಂದ ಹೊರಬೀಳಲಿದೆ. ಆರ್ ಸಿಬಿ ಕಳೆದ ಆರು ಪಂದ್ಯಗಳಿಂದ ಸತತವಾಗಿ ಗೆಲ್ಲುತ್ತಲೇ ಬಂದಿದೆ. ಹೀಗಾಗಿ ಇಂದಿನ ಪಂದ್ಯವನ್ನೂ ಗೆದ್ದು ಟೂರ್ನಿಯಲ್ಲಿ ಮುನ್ನಡೆಯುವ ಮೂಲಕ ಅಭಿಮಾನಿಗಳ ಬಹುದಿನಗಳ ಕನಸು ನನಸಾಗಿಸುವ ಭರವಸೆಯಲ್ಲಿದೆ.

ಆರ್ ಸಿಬಿ ಇದುವರೆಗೆ ಮೂರು ಬಾರಿ ಎಲಿಮಿನೇಟರ್ ಪಂದ್ಯವಾಡಿದೆ. ಈ ಪೈಕಿ ಗೆದ್ದಿದ್ದು ಕೇವಲ ಒಂದು ಬಾರಿ ಮಾತ್ರ. ಆದರೆ ಈ ಬಾರಿ ಆರ್ ಸಿಬಿ ಅತ್ಯುತ್ತಮ ಫಾರ್ಮ್ ನಲ್ಲಿದೆ. ಕ್ಯಾಮರೂನ್ ಗ್ರೀನ್, ರಜತ್ ಪಟಿದಾರ್, ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್ ನಲ್ಲಿದ್ದಾರೆ. ಗ್ಲೆನ್ ಮ್ಯಾಕ್ಸ್ ವೆಲ್ ಗೆ ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ಸಿಕ್ಕಿರಲಿಲ್ಲ. ಆದರೆ ಬೌಲಿಂಗ್ ನಲ್ಲಿ ಮಿಂಚಿದ್ದರು. ಎಲ್ಲಕ್ಕಿಂತ ಹೆಚ್ಚಾಗಿ ತಂಡದಲ್ಲಿ ಯಶ್ ದಯಾಳ್, ಸ್ವಪ್ನಿಲ್ ಸಿಂಗ್ ಜೊತೆಗೆ ಅನುಭವಿ ಫರ್ಗ್ಯುಸನ್, ಮೊಹಮ್ಮದ್ ಸಿರಾಜ್ ಅತ್ಯುತ್ತಮ ಕೊಡುಗೆ ನೀಡುತ್ತಿದ್ದಾರೆ. ಇದು ಆರ್ ಸಿಬಿ ಅವಕಾಶ ಹೆಚ್ಚಿಸಿದೆ.

ಇತ್ತ ರಾಜಸ್ಥಾನ್ ರಾಯಲ್ಸ್ ಕೂಡಾ ಕಡಿಮೆಯೇನಲ್ಲ. ಸ್ವತಃ ನಾಯಕ ಸಂಜು ಸ್ಯಾಮ್ಸನ್ ಸಿಡಿದು ನಿಂತು ತಂಡವನ್ನು ಏಕಾಂಗಿಯಾಗಿ ಗೆಲುವಿನತ್ತ ಕೊಂಡೊಯ್ಯಬಲ್ಲರು. ಅವರಿಗೆ ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಶಿಮ್ರಾನ್ ಹೆಟ್ಮೈರ್ ನಂತಹ ಘಟಾನುಘಟಿ ಟಿ20 ಸ್ಪೆಷಲಿಸ್ಟ್ ಗಳು ತಂಡದಲ್ಲಿದ್ದಾರೆ. ಹೀಗಾಗಿ ಆರ್ ಸಿಬಿ ಬೌಲರ್ ಗಳು ಎಚ್ಚರಿಕೆಯಿಂದ ಬೌಲಿಂಗ್ ಮಾಡಬೇಕಿದೆ. ಈ ಜಿದ್ದಾಜಿದ್ದಿನ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2024: ಪ್ಲೇ ಆಫ್ ಪಂದ್ಯದಲ್ಲಿ ಕೆಕೆಆರ್ ಮಾಡಿದ ದಾಖಲೆಗಳ ವಿವರ ಇಲ್ಲಿದೆ