ಐಪಿಎಲ್ 2024: ರಿಷಬ್ ಪಂತ್ ಅಬ್ಬರಕ್ಕೆ ಸೋತ ಗುಜರಾತ್ ಟೈಟನ್ಸ್

Krishnaveni K
ಗುರುವಾರ, 25 ಏಪ್ರಿಲ್ 2024 (08:54 IST)
Photo Courtesy: Twitter
ದೆಹಲಿ: ಐಪಿಎಲ್ 2024 ರಲ್ಲಿ ರಿಷಬ್ ಪಂತ್ ಅಬ್ಬರದ ಬ್ಯಾಟಿಂಗ್ ನಿಂದಾಗಿ ಗುಜರಾತ್ ಟೈಟನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 4 ರನ್ ಗಳ ರೋಚಕ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 224 ರನ್ ಗಳಿಸಿತು. ಪೃಥ್ವಿ ಶಾ 11, ಜ್ಯಾಕ್ ಫ್ರೇಝರ್ 23 ಗಳಿಸಿ ಔಟಾದರು. ಬಳಿಕ ಅಕ್ಸರ್ ಪಟೇಲ್ ಅಜೇಯ 66 ರನ್ ಗಳಿಸಿ ತಂಡಕ್ಕೆ ಆಧಾರವಾದರು. ಆದರೆ ಪಂದ್ಯದ ದಿಕ್ಕು ಬದಲಾಗಿದ್ದು ರಿಷಬ್ ಪಂತ್ ಅಬ್ಬರದ ಬ್ಯಾಟಿಂಗ್ ನಿಂದಾಗಿ. 43 ಎಸೆತ ಎದುರಿಸಿದ 8 ಸಿಕ್ಸರ್ ಸಹಿತ ಅಜೇಯ 88 ರನ್ ಗಳಿಸಿದರು.

ಈ ಮೊತ್ತ ಬೆನ್ನತ್ತಿದ ಗುಜರಾತ್ ಟೈಟನ್ಸ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಲಷ್ಟೇ ಶಕ್ತವಾಯಿತು. ಶುಬ್ಮನ್ ಗಿಲ್ ರನ್ನು ಬೇಗನೇ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ವೃದ್ಧಿಮಾನ್ ಸಹಾ 39 ರನ್ ಗಳಿಸಿದರು. ಸಾಯಿ ಸುದರ್ಶನ್ 39 ಎಸೆತಗಳಲ್ಲಿ 65 ರನ್ ಗಳಿಸಿ ಗೆಲುವಿನ ಆಸೆ ಚಿಗುರಿಸಿತು.  ಅವರಿಗೆ ಸಾಥ್ ನೀಡಿದ ಡೇವಿಡ್ ಮಿಲ್ಲರ್ 55 ರನ್ ಗಳ ಕೊಡುಗೆ ನೀಡಿದರು.

ಕೊನೆಯ ಓವರ್ ನಲ್ಲಿ ಗೆಲುವಿಗೆ 19 ರನ್ ಗಳಿಸಬೇಕಾಗಿತ್ತು. ಮೊದಲ ಎರಡು ಬಾಲ್ ಗಳನ್ನು ಬೌಂಡರಿಗಟ್ಟಿದ ರಶೀದ್ ಖಾನ್ ಐದನೇ ಎಸೆತವನ್ನು ಸಿಕ್ಸರ್ ಗಟ್ಟಿದರು. ಕೊನೆಯ ಎಸೆತದಲ್ಲಿ ರನ್ ಗಳಿಸಲು ವಿಫಲರಾಗಿದ್ದರಿಂದ ಗುಜರಾತ್ 4 ರನ್ ಗಳ ಸೋಲು ಅನುಭವಿಸಬೇಕಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

ಮುಂದಿನ ಸುದ್ದಿ
Show comments