Webdunia - Bharat's app for daily news and videos

Install App

IPL 2024: ಮುಂಬೈ ಪಾಳಯ ಸೇರಿಕೊಳ್ಳಲು ಬೇಕೆಂದೇ ತಡ ಮಾಡುತ್ತಿದ್ದಾರಾ ರೋಹಿತ್ ಶರ್ಮಾ

Krishnaveni K
ಗುರುವಾರ, 14 ಮಾರ್ಚ್ 2024 (11:07 IST)
ಮುಂಬೈ: ಐಪಿಎಲ್ 2024 ಆರಂಭಕ್ಕೆ ಕೆಲವೇ ದಿನ ಬಾಕಿಯಿದೆ. ಈಗಾಗಲೇ ಹಲವು ಆಟಗಾರರು ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡಾಗಿದೆ. ಆದರೆ ರೋಹಿತ್ ಶರ್ಮಾ ಇನ್ನೂ ಕೂಡಿಕೊಂಡಿಲ್ಲ.

ಸಾಮಾನ್ಯವಾಗಿ ರೋಹಿತ್ ಶರ್ಮಾ ಐಪಿಎಲ್ ಎಂದರೆ ಉತ್ಸಾಹದಿಂದಲೇ ಮುಂಬೈ ಇಂಡಿಯನ್ಸ್ ತಂಡದ ಜೊತೆಯಾಗುತ್ತಾರೆ. ಆದರೆ ಈ ಬಾರಿ ರೋಹಿತ್ ನಾಯಕರಲ್ಲ. ಕೇವಲ ಆಟಗಾರನಾಗಿ ತಂಡದಲ್ಲಿರಲಿದ್ದಾರೆ. ಹೀಗಾಗಿ ಅವರ ಫ್ಯಾನ್ಸ್ ಕೂಡಾ ಆಕ್ರೋಶದಲ್ಲಿದ್ದಾರೆ.

ಇದರ ನಡುವೆ ರೋಹಿತ್ ಇನ್ನೂ ತಂಡಕ್ಕೆ ಬಾರದೇ ಇರುವುದನ್ನು ನೋಡಿ ಫ್ಯಾನ್ಸ್ ಬಹುಶಃ ರೋಹಿತ್ ಗೆ ಈ ಟೀಂ ಸೇರಿಕೊಳ್ಳಲು ಇಷ್ಟವಿಲ್ಲವೇನೋ ಎನ್ನುತ್ತಿದ್ದಾರೆ. ನಿನ್ನೆಯಷ್ಟೇ ಮುಂಬೈ ತನ್ನ ಹೊಸ ಜೆರ್ಸಿಯನ್ನು ಅನಾವರಣಗೊಳಿಸಲು ವಿಡಿಯೋವೊಂದನ್ನು ಹೊರಬಿಟ್ಟಿದೆ. ಈ ವಿಡಿಯೋದಲ್ಲಿ ಮೊದಲು ರೋಹಿತ್ ಶರ್ಮಾ ಬರುತ್ತಾರೆ. ಆದರೆ ಈ ವಿಡಿಯೋ ನೋಡಿ ನೆಟ್ಟಿಗರು ಯಾಕೋ ರೋಹಿತ್ ಶರ್ಮಾ ಖುಷಿಯಾಗಿಲ್ಲ ಎನಿಸುತ್ತದೆ ಎನ್ನುತ್ತಿದ್ದಾರೆ.

ಮುಂಬೈ ನೂತನ ನಾಯಕ ಹಾರ್ದಿಕ್ ಪಾಂಡ್ಯ ಈಗಾಗಲೇ ತಂಡವನ್ನು ಕೂಡಿಕೊಂಡಿದ್ದು ಮೊದಲ ದಿನವೇ ಪೂಜೆ ಮಾಡುವ ಮೂಲಕ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ಈಗಾಗಲೇ ಅಭ್ಯಾಸವನ್ನೂ ಆರಂಭಿಸಿದ್ದಾರೆ. ಆದರೆ ರೋಹಿತ್, ಜಸ್ಪ್ರೀತ್ ಬುಮ್ರಾ ಮುಂತಾದ ಸ್ಟಾರ್ ಆಟಗಾರರು ಇನ್ನೂ ತಂಡವನ್ನು ಸೇರಿಕೊಂಡಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments