Webdunia - Bharat's app for daily news and videos

Install App

ಐಪಿಎಲ್ 2024: ಸನ್ ರೈಸರ್ಸ್ ಹೈದರಾಬಾದ್ ಪ್ಲೇ ಆಫ್ ಗೆ, ಡೆಲ್ಲಿ ಕ್ಯಾಪಿಟಲ್ಸ್ ಮನೆಗೆ

Krishnaveni K
ಶುಕ್ರವಾರ, 17 ಮೇ 2024 (08:33 IST)
ಹೈದರಾಬಾದ್: ಐಪಿಎಲ್ 2024 ರ ಗುಜರಾತ್ ಜೈಂಟ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಯಿತು. ಇದರೊಂದಿಗೆ ಹೈದರಾಬಾದ್ ಪ್ಲೇ ಆಫ್ ಗೆ ಅರ್ಹತೆ ಪಡೆಯಿತು.

ಹೈದರಾಬಾದ್ ಮೈದಾನದಲ್ಲಿ ಪಂದ್ಯ ಆಯೋಜನೆಯಾಗಿತ್ತು. ಆದರೆ ಮಳೆಯಿಂದಾಗಿ ಟಾಸ್ ಕೂಡಾ ನಡೆಯದೇ ಪಂದ್ಯ ರದ್ದಾಯಿತು. ಈ ಐಪಿಎಲ್ ಕೂಟದಲ್ಲಿ ಮಳೆಯಿಂದಾಗಿ ರದ್ದಾದ ಎರಡನೇ ಪಂದ್ಯ ಇದಾಗಿದೆ. ರಾತ್ರಿ 9 ಗಂಟೆಯವರೆಗೆ ನಿರೀಕ್ಷಣೆ ಮಾಡಿದ ಬಳಿಕ ಅಂಪಾಯರ್ ಗಳು ಪಂದ್ಯ ರದ್ದುಗೊಳಿಸಲು ತೀರ್ಮಾನಿಸಿದ್ದಾರೆ.

ಇತ್ತ ಗುಜರಾತ್ ಟೈಟನ್ಸ್ ಕೊನೆಯ ಲೀಗ್ ಪಂದ್ಯದಲ್ಲಿ ಸೋಲಿನೊಂದಿಗೆ ಕೂಟದಿಂದ ನಿರ್ಗಮಿಸಿತು. 14 ಪಂದ್ಯಗಳಲ್ಲಿ 5 ಗೆಲುವುಗಳೊಂದಿಗೆ 8 ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಇದೀಗ ಹೈದರಾಬಾದ್ ಗೆ ಕೊನೆಯ ಲೀಗ್ ಪಂದ್ಯ ಬಾಕಿಯಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ಕೊನೆಯ ಲೀಗ್ ಪಂದ್ಯವಾಡಲಿದ್ದು ಈ ಪಂದ್ಯವನ್ನು ಗೆದ್ದರೆ ಮತ್ತು ಕೊನೆಯ ಲೀಗ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಕೆಕೆಆರ್ ಗೆದ್ದರೆ ಹೈದರಾಬಾದ್ ಎರಡನೇ ಸ್ಥಾನಿಯಾಗಿ ಪ್ಲೇ ಆಫ್ ಗೇರಲಿದೆ.

ಹೈದರಾಬಾದ್ ಪ್ಲೇ ಆಫ್ ಗೇರುವುದು ಖಚಿತವಾಗುತ್ತಿದ್ದಂತೇ ಡೆಲ್ಲಿ ಕ್ಯಾಪಿಟಲ್ಸ್ ಕೂಟದಿಂದ ಅಧಿಕೃತವಾಗಿ ನಿರ್ಗಮಿಸಿತು. ಇದೀಗ ರಾಜಸ್ಥಾನ್ ರಾಯಲ್ಸ್ ತಂಡ ಕೆಕೆಆರ್ ವಿರುದ್ಧ ಗೆದ್ದರೆ ಎರಡನೇ ಸ್ಥಾನಕ್ಕೇರಲಿದೆ. ನಾಳೆ ನಡೆಯಲಿರುವ ಆರ್ ಸಿಬಿ ಮತ್ತು ಸಿಎಸ್ ಕೆ ನಡುವಿನ ಪಂದ್ಯದಲ್ಲಿ ಗೆಲ್ಲುವ ತಂಡ ಪ್ಲೇ ಆಫ್ ಗೇರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments