Webdunia - Bharat's app for daily news and videos

Install App

ಐಪಿಎಲ್ 2024: ಮುಂಬೈ ಇಂಡಿಯನ್ಸ್ ನಾಯಕತ್ವದ ಮೇಲೆ ಕಣ್ಣಿಟ್ಟಿದ ಇಬ್ಬರು!

Webdunia
ಸೋಮವಾರ, 18 ಡಿಸೆಂಬರ್ 2023 (12:02 IST)
ಮುಂಬೈ: ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ತನ್ನ ಯಶಸ್ವೀ ನಾಯಕ ರೋಹಿತ್ ಶರ್ಮಾರನ್ನು ಕಿತ್ತು ಹಾಕಿ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಿದ್ದು ಹಲವರಿಗೆ ಶಾಕ್ ನೀಡಿದೆ.

ಮೊದಲು ಮುಂಬೈ ತಂಡದಲ್ಲಿದ್ದ ಹಾರ್ದಿಕ್ ಬಳಿಕ ಗುಜರಾತ್ ನಾಯಕರಾಗಿ ಎರಡು ವರ್ಷ ಐಪಿಎಲ್ ಆಡಿದ್ದರು. ಈ  ವೇಳೆ ನಾಯಕ ರೋಹಿತ್ ಶರ್ಮಾ ಸ್ಥಾನದ ಮೇಲೆ ಇಬ್ಬರಿಗೆ ಕಣ್ಣಿತ್ತು. ಅವರೆಂದರೆ ಜಸ್ಪ್ರೀತ್ ಬುಮ್ರಾ ಮತ್ತು ಸೂರ್ಯಕುಮಾರ್ ಯಾದವ್.

ಸೂರ್ಯ ಕಳೆದ ಸೀಸನ್ ನಲ್ಲಿ ಮುಂಬೈ ನಾಯಕರಾಗಿಯೂ ಕೆಲವು ಪಂದ್ಯದಲ್ಲಿ ಕಾರ್ಯನಿರ್ವಹಿಸಿದ್ದರು. ಹೀಗಾಗಿ ಮುಂಬೈಗೆ ಮುಂದಿನ ನಾಯಕ ಪಟ್ಟ ತಮಗೇ ಸಿಗಬಹುದು ಎಂದು ಈ ಇಬ್ಬರೂ ಲೆಕ್ಕಾಚಾರ ಹಾಕಿದ್ದರು. ಆದರೆ ಯಾವಾಗ ಹಾರ್ದಿಕ್ ರನ್ನು ಫ್ರಾಂಚೈಸಿ ಮರಳಿ ತಂಡಕ್ಕೆ ಕರೆಯಿಸಿಕೊಂಡಿತೋ ಆಗ ಬುಮ್ರಾಗೆ ತಮ್ಮ ಸ್ಥಾನಕ್ಕೆ ಕುತ್ತು ಬಂದಿತು ಎಂಬ ವಾಸನೆ ಬಡಿದಿತ್ತು. ಈ ಕಾರಣಕ್ಕೇ ಅವರು ಇನ್ ಸ್ಟಾಗ್ರಾಂನಲ್ಲಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು.

ಹಾಗಿದ್ದರೂ ರೋಹಿತ್ ಶರ್ಮಾರನ್ನು ಇದೇ ಐಪಿಎಲ್ ನಲ್ಲೇ ನಾಯಕತ್ವದಿಂದ ಹೊರಹಾಕಿದ್ದು ಸೂರ್ಯಕುಮಾರ್ ಯಾದವ್ ಗೂ ಶಾಕ್ ನೀಡಿದೆ. ಹೀಗಾಗಿ ಇಬ್ಬರೂ ನಾಯಕತ್ವ ಪಟ್ಟದ ಆಕಾಂಕ್ಷಿಗಳಾಗಿದ್ದವರಿಗೆ ತೀವ್ರ ನಿರಾಸೆಯಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments