Publish Date: Wed, 22 May 2024 (11:22 IST)
Updated Date: Wed, 22 May 2024 (11:25 IST)
ಅಹಮ್ಮಾಬಾದ್: ಐಪಿಎಲ್ 2024 ರಲ್ಲಿ ಇಂದು ಆರ್ ಸಿಬಿ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ಎಲಿಮಿನೇಟರ್ ಪಂದ್ಯವಾಡಲಿದೆ. ಈ ಪಂದ್ಯಕ್ಕೆ ಮುನ್ನ ಮಾಜಿ ಬಾಸ್ ವಿಜಯ್ ಮಲ್ಯ ಟ್ವೀಟ್ ವೈರಲ್ ಆಗಿದೆ.
ಐಪಿಎಲ್ ನಲ್ಲಿ ಕೊನೆಯ ಹಂತದಲ್ಲಿ ಅದ್ಭುತ ಫಾರ್ಮ್ ಪ್ರದರ್ಶಿಸುತ್ತಿರುವ ಆರ್ ಸಿಬಿ ಆಟಗಾರರು ಈ ಬಾರಿ ಕಪ್ ಗೆಲ್ಲುವ ಫೇವರಿಟ್ ತಂಡವಾಗಿದ್ದಾರೆ. ಈಗಾಗಲೇ ಕೆಕೆಆರ್ ತಂಡ ಫೈನಲ್ ಪ್ರವೇಶಿಸಿದೆ. ಆರ್ ಸಿಬಿ ಇಂದು ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದರೆ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಈ ಪಂದ್ಯವನ್ನೂ ಗೆದ್ದರೆ ಫೈನಲ್ ಪ್ರವೇಶಿಸಬಹುದು.
ಆರ್ ಸಿಬಿಗೆ ಈ ಸಲ ಕಪ್ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸದಲ್ಲಿ ಅಭಿಮಾನಿಗಳಿದ್ದಾರೆ. ಈ ನಡುವೆ ಮಾಜಿ ಬಾಸ್ ವಿಜಯ್ ಮಲ್ಯ ಟ್ವೀಟ್ ಎಲ್ಲರ ಗಮನ ಸೆಳೆದಿದೆ. ಎಲಿಮಿನೇಟರ್ ಪಂದ್ಯಕ್ಕೆ ಮುನ್ನ ಟ್ವೀಟ್ ಮಾಡಿರುವ ವಿಜಯ್ ಮಲ್ಯ ಈ ಬಾರಿ ಆರ್ ಸಿಬಿ ಕಪ್ ಗೆದ್ದೇ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.ಈ ಬಾರಿ ಟ್ರೋಫಿ ಗೆಲ್ಲಲು ಉತ್ತಮ ಅವಕಾಶವಿದೆ ಎಂದು ನನ್ನ ಒಳ ಮನಸ್ಸು ಹೇಳುತ್ತಿದೆ. ಯಾವುದೇ ಚಿಂತೆಯಿಲ್ಲದೇ ಮುನ್ನುಗ್ಗಿ. ಬೆಸ್ಟ್ ಆಫ್ ಲಕ್ ಎಂದು ವಿಜಯ್ ಮಲ್ಯ ಟ್ವೀಟ್ ಮಾಡಿದ್ದಾರೆ.
ವಿಜಯ್ ಮಲ್ಯ ಟ್ವೀಟ್ ನೆಟ್ಟಿಗರ ಗಮನ ಸೆಳೆದಿದೆ. ಆರ್ ಸಿಬಿಯ ಮೊದಲ ಬಾಸ್ ವಿಜಯ್ ಮಲ್ಯ. 2008 ರಲ್ಲಿ ಆರ್ ಸಿಬಿ ತಂಡವನ್ನು 455 ಕೋಟಿ ರೂ. ನೀಡಿ ಆರ್ ಸಿಬಿ ತಂಡವನ್ನು ಖರೀದಿಸಿದ್ದರು. 2016 ರಲ್ಲಿ ಸಾಲದ ಸುಳಿಗೆ ಸಿಲುಕಿ ವಿದೇಶಕ್ಕೆ ಪರಾರಿಯಾಗಿದ್ದರು. ಇದೀಗ ಆರ್ ಸಿಬಿ ಮಾಲಿಕತ್ವ ಯುನೈಟೆಡ್ ಸ್ಪಿರಿಟ್ಸ್ ಕಂಪನಿಯದ್ದಾಗಿದೆ.