Webdunia - Bharat's app for daily news and videos

Install App

ಐಪಿಎಲ್ 2024: ಆರ್ ಸಿಬಿ ಈ ಸಲ ಕಪ್ ಗೆದ್ದೇ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದ ಮಾಜಿ ಬಾಸ್ ವಿಜಯ್ ಮಲ್ಯ

Krishnaveni K
ಬುಧವಾರ, 22 ಮೇ 2024 (11:22 IST)
ಅಹಮ್ಮಾಬಾದ್: ಐಪಿಎಲ್ 2024 ರಲ್ಲಿ ಇಂದು ಆರ್ ಸಿಬಿ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ಎಲಿಮಿನೇಟರ್ ಪಂದ್ಯವಾಡಲಿದೆ. ಈ ಪಂದ್ಯಕ್ಕೆ ಮುನ್ನ ಮಾಜಿ ಬಾಸ್ ವಿಜಯ್ ಮಲ್ಯ ಟ್ವೀಟ್ ವೈರಲ್ ಆಗಿದೆ.

ಐಪಿಎಲ್ ನಲ್ಲಿ ಕೊನೆಯ ಹಂತದಲ್ಲಿ ಅದ್ಭುತ ಫಾರ್ಮ್ ಪ್ರದರ್ಶಿಸುತ್ತಿರುವ ಆರ್ ಸಿಬಿ ಆಟಗಾರರು ಈ ಬಾರಿ ಕಪ್ ಗೆಲ್ಲುವ ಫೇವರಿಟ್ ತಂಡವಾಗಿದ್ದಾರೆ. ಈಗಾಗಲೇ ಕೆಕೆಆರ್ ತಂಡ ಫೈನಲ್ ಪ್ರವೇಶಿಸಿದೆ. ಆರ್ ಸಿಬಿ ಇಂದು ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದರೆ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಈ ಪಂದ್ಯವನ್ನೂ ಗೆದ್ದರೆ ಫೈನಲ್ ಪ್ರವೇಶಿಸಬಹುದು.

ಆರ್ ಸಿಬಿಗೆ ಈ ಸಲ ಕಪ್ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸದಲ್ಲಿ ಅಭಿಮಾನಿಗಳಿದ್ದಾರೆ. ಈ ನಡುವೆ ಮಾಜಿ ಬಾಸ್ ವಿಜಯ್ ಮಲ್ಯ ಟ್ವೀಟ್ ಎಲ್ಲರ ಗಮನ ಸೆಳೆದಿದೆ. ಎಲಿಮಿನೇಟರ್ ಪಂದ್ಯಕ್ಕೆ ಮುನ್ನ ಟ್ವೀಟ್ ಮಾಡಿರುವ ವಿಜಯ್ ಮಲ್ಯ ಈ ಬಾರಿ ಆರ್ ಸಿಬಿ ಕಪ್ ಗೆದ್ದೇ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.ಈ ಬಾರಿ ಟ್ರೋಫಿ ಗೆಲ್ಲಲು ಉತ್ತಮ ಅವಕಾಶವಿದೆ ಎಂದು ನನ್ನ ಒಳ ಮನಸ್ಸು ಹೇಳುತ್ತಿದೆ. ಯಾವುದೇ ಚಿಂತೆಯಿಲ್ಲದೇ ಮುನ್ನುಗ್ಗಿ. ಬೆಸ್ಟ್ ಆಫ್ ಲಕ್ ಎಂದು ವಿಜಯ್ ಮಲ್ಯ ಟ್ವೀಟ್ ಮಾಡಿದ್ದಾರೆ.

ವಿಜಯ್ ಮಲ್ಯ ಟ್ವೀಟ್ ನೆಟ್ಟಿಗರ  ಗಮನ ಸೆಳೆದಿದೆ. ಆರ್ ಸಿಬಿಯ ಮೊದಲ ಬಾಸ್ ವಿಜಯ್ ಮಲ್ಯ. 2008 ರಲ್ಲಿ ಆರ್ ಸಿಬಿ ತಂಡವನ್ನು 455 ಕೋಟಿ ರೂ. ನೀಡಿ ಆರ್ ಸಿಬಿ ತಂಡವನ್ನು ಖರೀದಿಸಿದ್ದರು.  2016 ರಲ್ಲಿ ಸಾಲದ ಸುಳಿಗೆ ಸಿಲುಕಿ ವಿದೇಶಕ್ಕೆ ಪರಾರಿಯಾಗಿದ್ದರು. ಇದೀಗ ಆರ್ ಸಿಬಿ ಮಾಲಿಕತ್ವ ಯುನೈಟೆಡ್ ಸ್ಪಿರಿಟ್ಸ್ ಕಂಪನಿಯದ್ದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments