ಐಪಿಎಲ್ 2024: ಆರ್ ಸಿಬಿ ವರ್ಸಸ್ ಸಿಎಸ್ ಕೆ ಪಂದ್ಯಕ್ಕೆ ಮಳೆ ಬಂದರೆ ಏನಾಗಲಿದೆ

Krishnaveni K
ಶನಿವಾರ, 18 ಮೇ 2024 (09:20 IST)
ಬೆಂಗಳೂರು: ಐಪಿಎಲ್ 2024 ರಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹತ್ವದ ಪಂದ್ಯವಾಡಲಿದೆ. ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಆರ್ ಸಿಬಿಗೆ ಪ್ಲೇ ಆಫ್ ಗೇರಲು ಅವಕಾಶ ಸಿಗಲಿದೆ. ಅತ್ತ ಸಿಎಸ್ ಕೆಗೂ ಪ್ಲೇ ಆಫ್ ದೃಷ್ಟಿಯಿಂದ ಈ ಪಮದ್ಯ ಗೆಲ್ಲಲೇಬೇಕು.

ಎರಡೂ ತಂಡಗಳ ಪರಿಸ್ಥಿತಿ ಇದೇ ಆಗಿರುವಾಗ ಮ್ಯಾಚ್ ಎಷ್ಟು ಪೈಪೋಟಿಯಿಂದ ಕೂಡಿರಬಹುದು ಎಂದು ಯೋಚಿಸಿದರೇ ಅಭಿಮಾನಿಗಳಿಗೆ ರೋಮಾಂಚನವಾಗುತ್ತಿದೆ. ಇದೇ ಕಾರಣಕ್ಕೆ ಇಂದಿನ ಪಂದ್ಯಕ್ಕೆ ಈಗಾಗಲೇ ಚಿನ್ನಸ್ವಾಮಿ ಮೈದಾನದ ಟಿಕೆಟ್ ಗಳು ಸೋಲ್ಡ್ ಔಟ್ ಆಗಿದೆ.

ಆದರೆ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ನಾಳೆಯ ಹವಾಮಾನ ವರದಿ ಪ್ರಕಾರವೂ ಮಳೆಯಾಗುವ ಸಾಧ‍್ಯತೆಯಿದೆ. ಹೀಗಾಗಿ ಮಳೆ ಬಂದು ಪಂದ್ಯ ರದ್ದಾಗದಿದ್ದರೆ ಸಾಕು ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಒಂದು ವೇಳೆ ಮಳೆ ಬಂದರೆ ಯಾರಿಗೆ ಲಾಭ? ಯಾರಿಗೆ ನಷ್ಟ ಎಂದು ನೋಡೋಣ.

ಸದ್ಯಕ್ಕೆ 13 ಪಂದ್ಯಗಳಿಂದ 7 ಪಂದ್ಯ ಗೆದ್ದು 14 ಅಂಕ ಪಡೆದಿರುವ ಸಿಎಸ್ ಕೆ ಆರ್ ಸಿಬಿಗಿಂತ ಮುಂದಿದೆ. ಇತ್ತ ಆರ್ ಸಿಬಿ 13 ಪಂದ್ಯಗಳಿಂದ 6 ಪಂದ್ಯ ಗೆದ್ದುಕೊಂಡಿದೆ. ಆದರೆ ನೆಟ್ ರನ್ ರೇಟ್ ಆಧಾರದಲ್ಲಿ ಸಿಎಸ್ ಕೆಯನ್ನು ಆರ್ ಸಿಬಿ 18 ಓವರ್ ಗಳಲ್ಲಿ ಅಥವಾ 18 ರನ್ ಗಳಿಂದ ಸೋಲಿಸಿದರೆ ಪ್ಲೇ ಆಫ್ ಪ್ರವೇಶಿಸಲಿದೆ.

ಒಂದು ವೇಳೆ ಬಂದು ಪಂದ್ಯ ರದ್ದಾದರೆ ಎರಡೂ ತಂಡಗಳು ತಲಾ ಒಂದು ಅಂಕ ಹಂಚಿಕೊಳ್ಳಲಿವೆ. ಆಗ ಸಿಎಸ್ ಕೆ 15 ಅಂಕ ಪಡೆದುಕೊಳ್ಳಲಿದೆ. ಆದರೆ ಆರ್ ಸಿಬಿ 13 ಅಂಕಕ್ಕೆ ತೃಪ್ತಿಪಟ್ಟುಕೊಳ‍್ಳಲಿದೆ. ಇದರಿಂದಾಗಿ ಸಿಎಸ್ ಕೆ ಸುಲಭವಾಗಿ ಪ್ಲೇ ಆಫ್ ಪ್ರವೇಶಿಸಲಿದೆ. ಹೀಗಾಗಿ ಇಂದಿನ ಪಂದ್ಯಕ್ಕೆ ಮಳೆ ಬರಲಿ ಎಂದು ಸಿಎಸ್ ಕೆ ಅಭಿಮಾನಿಗಳು ಪ್ರಾರ್ಥಿಸಬಹುದು. ಆದರೆ ಆರ್ ಸಿಬಿ ಅಭಿಮಾನಿಗಳು ಮಳೆ ಬಾರದಂತೆ ಪ್ರಾರ್ಥನೆ ಮಾಡಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

ಮುಂದಿನ ಸುದ್ದಿ
Show comments