ಐಪಿಎಲ್ 2024: ರಾಜಸ್ಥಾನ್ ರಾಯಲ್ಸ್-ಕೆಕೆಆರ್ ನಡುವೆ ಇಂದು ಗೆಲ್ಲುವವರು ಯಾರು

Krishnaveni K
ಮಂಗಳವಾರ, 16 ಏಪ್ರಿಲ್ 2024 (08:49 IST)
ಕೋಲ್ಕೊತ್ತಾ: ಐಪಿಎಲ್ 2024 ರಲ್ಲಿ ಇಂದು ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್ ನಡುವೆ ಕೋಲ್ಕೊತ್ತಾದ ಈಡನ್ ಗಾರ್ಡನ್ ನಲ್ಲಿ ಪಂದ್ಯ ನಡೆಯಲಿದೆ.

ಇದರೊಂದು ರೀತಿಯಲ್ಲಿ ಅಗ್ರ ಎರಡು ತಂಡಗಳ ನಡುವಿನ ಜಿದ್ದಾಜಿದ್ದಿನ ಪಂದ್ಯ ಎಂದರೂ ತಪ್ಪಾಗಲಾರದು. ರಾಜಸ್ಥಾನ್ ರಾಯಲ್ಸ್ ತಂಡ ಸಂಜು ಸ್ಯಾಮ್ಸನ್ ನೇತೃತ್ವದಲ್ಲಿ ಇದುವರೆಗೆ ಅದ್ಭುತ ಪ್ರದರ್ಶನ ನೀಡುತ್ತಲೇ ಬಂದಿದೆ. ಇದುವರೆಗೆ ಆಡಿದ 6 ಪಂದ್ಯಗಳ ಪೈಕಿ 5 ರಲ್ಲಿ ಗೆಲುವು ಸಾಧಿಸಿರುವ ರಾಜಸ್ಥಾನ್ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ.

ಇದುವರೆಗೆ ಆಡಿದ ಎಲ್ಲಾ ಪಂದ್ಯಗಳಲ್ಲೂ ಸಂಜು ಚಾಣಕ್ಷ್ಯ ನಾಯಕತ್ವ, ಬೌಲರ್ ಗಳ ಯೋಜನಾಬದ್ಧ ದಾಳಿಯಿಂದಾಗಿಯೇ ರಾಜಸ್ಥಾನ್ ಗೆಲುವು ಕಂಡಿದೆ. ಇತರೆ ತಂಡಗಳಿಂದ ರಾಜಸ್ಥಾನ್ ವ್ಯತ್ಯಸ್ಥವಾಗಿರುವುದೇ ಇಲ್ಲಿ. ಆದರೆ ಟೀಂ ಇಂಡಿಯಾದ ಪ್ರತಿಭಾವಂತ ಬ್ಯಾಟಿಗ ಯಶಸ್ವಿ ಜೈಸ್ವಾಲ್ ಯಾಕೋ ಐಪಿಎಲ್ ನಲ್ಲಿ ಕೊಂಚ ಮಂಕಾಗಿದ್ದಾರೆ.

ಇತ್ತ ಕೆಕೆಆರ್ ಕೂಡಾ ಇದುವರೆಗೆ ಆಡಿದ 5 ಪಂದ್ಯಗಳ ಪೈಕಿ ಕೇವಲ 1 ಸೋಲು ಅನುಭವಿಸಿದ್ದು ಉಳಿದ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಟಿ20 ಸ್ಪೆಷಲಿಸ್ಟ್ ಗಳನ್ನೇ ಹೊಂದಿರುವ ಕೆಕೆಆರ್ ಸೋಲಿಸುವುದು ಅಷ್ಟು ಸುಲಭವಲ್ಲ. ಶ್ರೇಯಸ್ ಅಯ್ಯರ್ ಜೊತೆಗೆ ರಿಂಕು ಸಿಂಗ್, ಆಂಡ್ರೆ ರಸೆಲ್ ನಂತಹ ಹೊಡೆಬಡಿಯ ಆಟಗಾರರು ತಂಡದಲ್ಲಿದ್ದಾರೆ. ಇದೊಂದು ರೀತಿಯಲ್ಲಿ ಸಮಬಲರ ಹೋರಾಟವಾಗಿದ್ದು, ಇಂದಿನ ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಆಸ್ಟ್ರೇಲಿಯಾ ನಡುವೆ ನಾಳೆ ಕೊನೆಯ ಏಕದಿನ: ರೋಹಿತ್, ಕೊಹ್ಲಿ ಫ್ಯಾನ್ಸ್ ಗೆ ಕಾಡ್ತಿದೆ ಭಯ

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

ಮುಂದಿನ ಸುದ್ದಿ
Show comments