Webdunia - Bharat's app for daily news and videos

Install App

ಐಪಿಎಲ್ 2024: ಫಾರ್ಮ್ ಗೆ ಬಂದ ಯಶಸ್ವಿ ಜೈಸ್ವಾಲ್, ರಾಜಸ್ಥಾನ್ ಗೆ ಮತ್ತೊಂದು ಜಯ

Krishnaveni K
ಮಂಗಳವಾರ, 23 ಏಪ್ರಿಲ್ 2024 (08:30 IST)
Photo Courtesy: Twitter
ಜೈಪುರ: ಐಪಿಎಲ್ 2024 ರಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತೊಂದು ಗೆಲುವು ಸಾಧಿಸಿದೆ. ಯಶಸ್ವಿ ಜೈಸ್ವಾಲ್ ಶತಕದ ನೆರವಿನಿಂದ ಮುಂಬೈ  ವಿರುದ್ಧ ನಡೆದ ಪಂದ್ಯವನ್ನು ರಾಜಸ್ಥಾನ್  9 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಮುಂಬೈಗೆ ಅಗ್ರ ಕ್ರಮಾಂಕ ಕೈ ಕೊಟ್ಟಿತು. ಇದರಿಂದಾಗಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು. ರೋಹಿತ್ ಶರ್ಮಾ 6, ಇಶಾನ್ ಕಿಶನ್ ಶೂನ್ಯಕ್ಕೆ ನಿರ್ಗಮಿಸಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಮಿಂಚಿದ ತಿಲಕ್ ವರ್ಮ 45 ಎಸೆತಗಳಿಂದ 65 ರನ್ ಸಿಡಿಸಿದರು. ನೇಹಲ್ ವಧೇರಾ 49 ರನ್ ಗಳ ಕಾಣಿಕೆ ನೀಡಿದರು. ರಾಜಸ್ಥಾನ್ ಪರ ಮಾರಕ ದಾಳಿ ಸಂಘಟಿಸಿದ ಸಂದೀಪ್ ಶರ್ಮ 5 ವಿಕೆಟ್ ಕಬಳಿಸಿ ಮಿಂಚಿದರು.

ಈ ಮೊತ್ತ ಬೆನ್ನತ್ತಿದ ರಾಜಸ್ಥಾನ್ ಗೆ ಆರಂಭಿಕ ಯಶಸ್ವಿ ಜೈಸ್ವಾಲ್-ಜೋಸ್ ಬಟ್ಲರ್ ಜೋಡಿ ಅದ್ಭುತ ಆರಂಭ ನೀಡಿತು. 60 ಎಸೆತ ಎದುರಿಸಿದ ಜೈಸ್ವಾಲ್ 7 ಭರ್ಜರಿ ಸಿಕ್ಸರ್ ಗಳ ನೆರವಿನಿಂದ 104 ರನ್ ಗಳಿಸಿದರು. ಬಟ್ಲರ್ 35 ರನ್ ಗಳಿಸಿದರು. ಕೊನೆಯಲ್ಲಿ ನಾಯಕ ಸಂಜು ಸ್ಯಾಮ್ಸನ್ 28 ಎಸೆತಗಳಿಂದ 38 ರನ್ ಸಿಡಿಸಿ ತಂಡಕ್ಕೆ ಗೆಲುವು ಕೊಡಿಸಿದರು. ಅಂತಿಮವಾಗಿ ರಾಜಸ್ಥಾನ್ 18.4 ಓವರ್ ಗಳಲ್ಲಿ 183 ರನ್ ಗಳಿಗೆ ಆಲೌಟ್ ಆಯಿತು.

ಇದರೊಂದಿಗೆ ರಾಜಸ್ಥಾನ್ ಮತ್ತೆ ತನ್ನ ಅಗ್ರಪಟ್ಟ ಕಾಯ್ದುಕೊಂಡಿತು. 8 ಪಂದ್ಯಗಳಿಂದ 7 ಗೆಲುವು ಸಂಪಾದಿಸಿರುವ ರಾಜಸ್ಥಾನ್ ಒಟ್ಟು 14 ಅಂಕ ಸಂಪಾದಿಸಿದೆ. ಅತ್ತ ಮುಂಬೈ ಇಂಡಿಯನ್ಸ್ 8 ಪಂದ್ಯಗಳಿಂದ ಕೇವಲ 3 ಗೆಲುವು ಸಂಪಾದಿಸಿ ಈಗ ಪ್ಲೇ ಆಫ್ ಹಂತಕ್ಕೇರುವುದು ಅನುಮಾನವಾಗಿದೆ. ಸದ್ಯಕ್ಕೆ ಮುಂಬೈ ಅಂಕಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

IND vs ENG: ಇಷ್ಟಕ್ಕಾದ್ರೂ ಕನ್ನಡಿಗ ಕರುಣ್ ನಾಯರ್ ತಂಡದಲ್ಲಿರಬೇಕು ಎಂದ ಫ್ಯಾನ್ಸ್

ಪಂದ್ಯದ ನಡುವೆ ಕ್ರಿಕೆಟಿಗರು, ಪ್ರೇಕ್ಷಕರು ಕಿವಿಗೆ ಈ ಸಾಧನವನ್ನು ಏಕೆ ಹಾಕಿಕೊಳ್ಳುತ್ತಿದ್ದಾರೆ

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಪಕ್ಕದಲ್ಲೇ ಇಂಥಾ ಸುಂದರಿ ಇರಲು...ಇದೇ ಕಾರಣಕ್ಕೆ ದ್ವಿತೀಯ ಟೆಸ್ಟ್ ಆಡಲ್ಲ ಅಂದ್ರಂತೆ ಬುಮ್ರಾ

ಮುಂದಿನ ಸುದ್ದಿ
Show comments