ಚಂಡೀಗಢ: ಮಂಗಳವಾರ ಚಂಡೀಗಢದ ಮುಲ್ಲನ್‌ಪುರದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡವನ್ನು ಸೋಲಿಸಿ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಮೂರನೇ ಗೆಲುವು ದಾಖಲಿಸುವ ಮೂಲಕ ಉದಯೋನ್ಮುಖ ತಾರೆ ಪ್ರಿಯಾಂಶ್ ಆರ್ಯ ಗಮನ ಸೆಳೆದರು.
20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 219 ರನ್ ಗಳಿಸುತ್ತಿದ್ದ ಹಾಗೇ 24 ವರ್ಷದ ಕ್ರಿಕೆಟಿಗ ಪ್ರಿಯಾಂಶ್ ಆರ್ಯ ಅಬ್ಬರದ ಶತಕ ಗಳಿಸಿದರು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಅವರು ಉತ್ತಮ ಆರಂಭವನ್ನು ಕಂಡುಕೊಂಡರು.
ಇನ್ನೂ ಪಿಬಿಕೆಎಸ್ ನೀಡಿದ ಗುರಿಯನ್ನು ಬೆನ್ನಟ್ಟಿದ ಸಿಎಸ್‌ಕೆ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 201ಗಳಿಸಿ, ಸೋಲೋಪ್ಪಿಕೊಂಡಿತು. ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿರುವ ಸಿಎಎಸ್‌ಕೆ ಪಾಯಿಂಟ್ಸ್ ಟೇಬಲ್‌ನಲ್ಲಿ 9ನೇ ಸ್ಥಾನದಲ್ಲಿದೆ.