IPL 2025 Finals: ಮಂಗಳವಾರ ಆಂಜನೇಯನ ವಾರ, ಆರ್ ಸಿಬಿ ಗೆಲ್ಲೋದು ಪಕ್ಕಾ

Krishnaveni K
ಶುಕ್ರವಾರ, 30 ಮೇ 2025 (13:27 IST)
ಬೆಂಗಳೂರು: ಐಪಿಎಲ್ 2025 ರಲ್ಲಿ ಫೈನಲ್ ಗೇರಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ ನಿರೀಕ್ಷೆ ಬೆಟ್ಟದಷ್ಟಿದೆ. ಇದೀಗ ಜೂನ್ 3 ಮಂಗಳವಾರದಂದು ಫೈನಲ್ ನಡೆಯಲಿದ್ದು, ಆಂಜನೇಯನ ವಾರ ಫೈನಲ್ ಗೆಲ್ಲೋದು ಪಕ್ಕಾ ಎನ್ನುತ್ತಿದ್ದಾರೆ ಫ್ಯಾನ್ಸ್.

ಆರ್ ಸಿಬಿಗೆ ಈ ಬಾರಿ ಆರಂಭದಿಂದಲೂ ಎಲ್ಲವೂ ಶುಭವೇ ಆಗುತ್ತಿದೆ. ವಿರಾಟ್ ಕೊಹ್ಲಿ ಜೆರ್ಸಿ 18, ಐಪಿಎಲ್ ಆವೃತ್ತಿಯೂ 18. ಹೀಗಾಗಿ ಈ ಬಾರಿ ಆರ್ ಸಿಬಿಗೆ ಲಕ್ ಕುದರಲಿದೆ ಎಂದು ಅಭಿಮಾನಿಗಳು ಮೊದಲಿನಿಂದಲೂ ನಂಬಿಕೆಯಿಟ್ಟುಕೊಂಡಿದ್ದಾರೆ.

ಇದೀಗ ಆರ್ ಸಿಬಿ ನಿರೀಕ್ಷೆಯಂತೇ ಫೈನಲ್ ಗೇರಿದೆ. ಅದು ಮಂಗಳವಾರ ಫೈನಲ್ ಪಂದ್ಯ ನಡೆಯಲಿದೆ. ಮಂಗಳವಾರ ಆಂಜನೇಯನಿಗೆ ವಿಶೇಷವಾದ ದಿನ. ಸಾಕಷ್ಟು ಜನ ಆರ್ ಸಿಬಿ ಗೆಲ್ಲಲಿ ಎಂದು ಆಂಜನೇಯನಿಗೆ ಪ್ರಾರ್ಥನೆ ಮಾಡುತ್ತಿದ್ದಾರೆ.

ಹೀಗಾಗಿಯೇ ಅಭಿಮಾನಿಗಳು ಆಂಜನೇಯನ ಆಶೀರ್ವಾದದಿಂದ ಆರ್ ಸಿಬಿ ಮಂಗಳವಾರ ಕಪ್ ಎತ್ತಲಿದೆ ಎಂದೇ ನಿರೀಕ್ಷೆಯಿಟ್ಟುಕೊಂಡಿದ್ದಾರೆ. ಐಪಿಎಲ್ ಈ ಹಿಂದೆಯೂ ಫೈನಲ್ ಗೇರಿದೆ. ಆದರೆ ಆಗೆಲ್ಲಾ ಕಪ್ ಗೆಲ್ಲಲು ಸಾಧ್ಯವಾಗಲೇ ಇಲ್ಲ. ಆದರೆ ಈ ಬಾರಿ ಟೂರ್ನಮೆಂಟ್  ನ ಮೊದಲ ಪಂದ್ಯದಿಂದಲೇ ಆರ್ ಸಿಬಿ ತವರಿನ ಪಂದ್ಯಗಳಲ್ಲಿ ಬಿಟ್ಟರೆ ಉಳಿದೆಲ್ಲಾ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಾ ಬಂದಿದೆ. ತವರಿನಾಚೆ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆಯನ್ನೂ ಮಾಡಿದೆ. ಇದೀಗ ಫೈನಲ್ ಪಂದ್ಯ ಅಹಮ್ಮದಾಬಾದ್ ನಲ್ಲಿ ನಡೆಯಲಿದ್ದು, ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸ ಅಭಿಮಾನಿಗಳಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments