IPL 2025, MI vs PBKS Match: ಈ ಲೆಕ್ಕಚಾರದಂತೆ ನಡೆದರೆ ಈ ತಂಡಕ್ಕೆ ಗೆಲುವು ನಿಶ್ಚಿತ

Sampriya
ಭಾನುವಾರ, 1 ಜೂನ್ 2025 (16:30 IST)
Photo Credit X
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕ್ವಾಲಿಫೈಯರ್ 2 ಪಂದ್ಯದಲ್ಲಿ ಇಂದು ಐದು ಬಾರಿಯ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್, ಪಂಜಾಬ್‌ ಕಿಂಗ್ಸ್‌ ಜತೆ ಮುಖಾಮುಖಿಯಾಗಲಿದೆ. ಇದುವರೆಗೂ ಮುಂಬೈ ಹಾಗೂ ಪಂಜಾಬ್ ಕಿಂಗ್ಸ್‌ 33 ಬಾರಿ ಮುಖಾಮುಖಿಯಾಗಿದೆ.

ಇದರಲ್ಲಿ ಮುಂಬೈ 17 ಬಾರಿ, ಪಂಜಾಬ್ 15 ಬಾರಿ ಹಾಗೂ ಒಂದು ಪಂದ್ಯಾಟ ಟೈ ಆಗಿದೆ. ಈ ಹಿಂದಿನ ಲೆಕ್ಕಚಾರದಂತೆ ನಡೆದರೆ ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್‌ ಇಂದು ಗೆಲುವಿನ ನಗೆ ಬೀರುವ ಸಾಧ್ಯತೆಯಿದೆ.

ಫೈನಲ್ ಪಂದ್ಯಾಟಕ್ಕೆ ಲಗ್ಗೆಯಿಡಲು ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಉಭಯ ತಂಡಗಳು ಸೆಣಸಾಡಲಿವೆ.

ಮುಲ್ಲನ್‌ಪುರದ ನ್ಯೂ ಪಿಸಿಎ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಹೆಚ್ಚಿನ ಸ್ಕೋರಿಂಗ್ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಅನ್ನು ಸೋಲಿಸಿದ ನಂತರ ಇದೀಗ ಹೆಚ್ಚಿನ ಆತ್ಮವಿಶ್ವಾಸದೊಂದಿಗೆ ಪಂಜಾಬ್ ಜತೆ ಕಣಕ್ಕಿಳಿಯಲಿದೆ.

ಮತ್ತೊಂದೆಡೆ, ಪಂಜಾಬ್ ತಂಡವು ಗುರುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಕ್ವಾಲಿಫೈಯರ್ 1 ರಲ್ಲಿ ನಿರಾಶಾದಾಯಕ ಸೋಲಿನ ನಂತರ ಗೆಲುವಿನ ಹುಮ್ಮಸ್ಸಿನೊಂದಿಗೆ ಮುಂಬೈ ಅನ್ನು ಎದುರಿಸಲಿದೆ.

ಇಂದಿನ ಬ್ಲಾಕ್‌ಬಸ್ಟರ್ ಆಟದ ಮುಂದೆ, PBKS vs MI ಪೈಪೋಟಿಯಲ್ಲಿ ಕೆಲವು ಪ್ರಮುಖ ಅಂಕಿಅಂಶಗಳನ್ನು ನೋಡೋಣ:

PBKS vs MI: ಐಪಿಎಲ್‌ನಲ್ಲಿ ಹೆಡ್-ಟು-ಹೆಡ್ ದಾಖಲೆ

ಆಡಿದ ಒಟ್ಟು ಪಂದ್ಯಗಳು: 33

PBKS ಗೆಲುವುಗಳು: 15

MI ಗೆಲುವುಗಳು: 17

ಟೈ ಆಗಿರುವ ಪಂದ್ಯಾಟ: 1<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಮುಂದಿನ ಸುದ್ದಿ
Show comments