IPL 2025 RCB vs PBKS: ಪಂಜಾಬ್ ಕಿಂಗ್ಸ್ ಮಣಿಸಿ ಆರ್ ಸಿಬಿ ಫೈನಲ್ ಗೆ

Krishnaveni K
ಗುರುವಾರ, 29 ಮೇ 2025 (22:06 IST)
Photo Credit: X
ಚಂಡೀಘಡ: ಐಪಿಎಲ್ 2025 ರಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದ ಆರ್ ಸಿಬಿ ಫೈನಲ್ ಗೇರಿದ ಸಾಧನೆ ಮಾಡಿದೆ.

2016 ರ ನಂತರ ಇದೇ ಮೊದಲ ಬಾರಿಗೆ ಆರ್ ಸಿಬಿ ಈ ಕೂಟದಲ್ಲಿ ಹೊಸ ನಾಯಕತ್ವ ಹೊಸ ಜೋಶ್ ನಲ್ಲಿ ಆಡಿದೆ. ಪ್ರತೀ ಬಾರಿಯೂ ಲೀಗ್ ಹಂತದಲ್ಲಿಯೇ ಸೋತು ಟ್ರೋಲ್ ಗೊಳಗಾಗುವ ಆರ್ ಸಿಬಿ ಈ ಬಾರಿ ಫೈನಲ್ ಗೇರಿದ್ದು, ಮೊದಲ ಸಲ ಕಪ್ ನಮ್ದೇ ಎಂದು ಹೇಳುವ ಭರವಸೆ ಮೂಡಿಸಿದೆ.

ಇಂದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 14.1 ಓವರ್ ಗಳಲ್ಲಿ 101 ರನ್ ಗಳಿಗೆ ಆಲೌಟ್ ಆಯಿತು. ಆರ್ ಸಿಬಿ ಪರ ಬೆಂಕಿನ ಚೆಂಡು ಎಸೆದ ಜೋಶ್ ಹೇಝಲ್ ವುಡ್, ಸುಯಾಶ್ ಶರ್ಮಾ ತಲಾ 3 ವಿಕೆಟ್,  ಯಶ್ ದಯಾಳ್ 2, ಭುವನೇಶ್ವರ್ ಕುಮಾರ್, ರೊಮಾರಿಯೊ ಶೆಫರ್ಡ್ ತಲಾ 1 ವಿಕೆಟ್ ಕಬಳಿಸಿದರು. ಪಂಜಾಬ್ ಪರ ಸ್ಟಾಯ್ನಿಸ್ 26 ರನ್ ಗಳಿಸಿದ್ದೇ ಗರಿಷ್ಠ ಸ್ಕೋರ್ ಆಗಿತ್ತು.

ಈ ಮೊತ್ತ ಬೆನ್ನತ್ತಿದ ಆರ್ ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯನ್ನು ಆರಂಭದಲ್ಲೇ ಕಳೆದುಕೊಂಡಿತು. ಕೊಹ್ಲಿ ಕೇವಲ 12 ರನ್ ಗಳಿಸಿ ಔಟಾದರು. ಬಳಿಕ ಫಿಲ್ ಸಾಲ್ಟ್ 56 ರನ್ ಗಳ ಅದ್ಭುತ ಇನಿಂಗ್ಸ್ ಆಡಿ ಕೊನೆಯವರೆಗೆ ಉಳಿದರು. ಮಯಾಂಕ್ ಅಗರ್ವಾಲ್ 19 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ನಾಯಕ ರಜತ್ ಪಾಟೀದಾರ್ 15 ರನ್ ಗಳಿಸಿ ಅಜೇಯರಾಗುಳಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

INDW vs NZW: ಅಂತೂ ಇಂತೂ ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಭಾರತ ವನಿತೆಯರು

ಮುಂದಿನ ಸುದ್ದಿ
Show comments