ಜೈಪುರ: ಐಪಿಎಲ್ 2025 ರ ಇಂದಿನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಾಜಸ್ಥಾನ್ ರಾಯಲ್ಸ್ 174 ರನ್ ಗಳ ಗೆಲುವಿನ ಗುರಿ ನೀಡಿದೆ.
ಇಂದು ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ರಾಜಸ್ಥಾನ್ ರಾಯಲ್ಸ್ ಗೆ ಯಶಸ್ವಿ ಜೈಸ್ವಾಲ್ ಸ್ಪೋಟಕ ಆರಂಭ ನೀಡಿದರು. ಒಟ್ಟು 47 ಎಸೆತ ಎದುರಿಸಿದ ಅವರು 75 ರನ್ ಗಳಿಸಿದರು. ಉಳಿದಂತೆ ರಿಯಾನ್ ಪರಾಗ್ 30, ಧ್ರುವ್ ಜ್ಯುರೆಲ್ ಅಜೇಯ 35 ರನ್ ಗಳಿಸಿದರು. ಇದರಿಂದಾಗಿ ರಾಜಸ್ಥಾನ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿತು.
ಆರ್ ಸಿಬಿ ಪರ ಭುವನೇಶ್ವರ್ ಕುಮಾರ್, ಯಶ್ ದಯಾಳ್, ಜೋಶ್ ಹೇಝಲ್ ವುಡ್, ಕೃನಾಲ್ ಪಾಂಡ್ಯ ತಲಾ 1 ವಿಕೆಟ್ ತಮ್ಮದಾಗಿಸಿಕೊಂಡರು. ರಾಜಸ್ಥಾನ್ ಉತ್ತಮ ಆರಂಭ ಪಡೆದರೂ ದೊಡ್ಡ ಮೊತ್ತ ಗಳಿಸಲು ವಿಫಲವಾಯಿತು.
ಕಳೆದ ಪಂದ್ಯವನ್ನು ಸೋತಿರುವ ಆರ್ ಸಿಬಿ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಹೀಗಾಗಿ ಇಂದು ರಾಜಸ್ಥಾನ್ ಗೆ ದೊಡ್ಡ ಮೊತ್ತ ಗಳಿಸಲು ಅವಕಾಶ ನೀಡದೇ ಇರುವುದು ಪ್ಲಸ್ ಪಾಯಿಂಟ್.