Publish Date: Sat, 30 May 2026 (15:05 IST)
Updated Date: Sat, 30 May 2026 (15:10 IST)
ಬೆಂಗಳೂರು: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಬಾರಿ ಐಪಿಎಲ್‌ನಲ್ಲಿ ಫೈನಲ್ ತಲುಪಿದೆ. ಭಾನುವಾರ ನಡೆಯುವ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಆರ್‌ಸಿಬಿ ತಂಡವು ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದೆ.
ಐಪಿಎಲ್ 2026ರ ಫೈನಲ್ ಪಂದ್ಯದ ನಂತರ ಅಭಿಮಾನಿಗಳ ಸಂಭ್ರಮಾಚರಣೆ ಬೆಂಗಳೂರು ಪೊಲೀಸರು ಕೆಲ ಬ್ರೇಕ್ ಹಾಕಿದ್ದಾರೆ. ಪಟಾಕಿ ಸಿಡಿಸುವುದು, ರಸ್ತೆಗಳಲ್ಲಿ ಕೂಗಾಡುತ್ತ ಆಚರಣೆಗಳನ್ನು ಮಾಡುವುದು, ವಾಗ್ವಾದ, ಜಗಳದಲ್ಲಿ ತೊಡಗದಂತೆ ಬೆಂಗಳೂರು ನಗರ ಪೊಲೀಸರು ಖಡಕ್ ಮಾರ್ಗಸೂಚಿ ಹೊರಡಿಸಿದ್ದಾರೆ.
1,30,000ಕ್ಕೂ ಹೆಚ್ಚು ಆಸನಗಳಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ. 2025ರ ಜೂನ್ ನಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು. ಹೀಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಈ ಸೂಚನೆ ನೀಡಿದ್ದಾರೆ.
ಸಾರ್ವಜನಿಕರು ಸುರಕ್ಷತಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಪಂದ್ಯ ಮುಕ್ತಾಯದ ಬಳಿಕ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಆಚರಣೆಗಳಲ್ಲಿ ತೊಡಗಬಾರದು ಎಂದು ಪೊಲೀಸರು ಸೂಚಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳ ಪೂರ್ವಾನುಮತಿ ಇಲ್ಲದೆ ರಸ್ತೆಗಳಲ್ಲಿ ಎಲ್‌ಇಡಿ ಪರದೆಗಳನ್ನು ಅಳವಡಿಸಬಾರದು. ಫೈನಲ್ ಪಂದ್ಯ ವೀಕ್ಷಿಸಲು ಮಾಲ್‌ಗಳು, ಪಬ್‌ಗಳು ಅಥವಾ ಇತರ ಸಂಸ್ಥೆಗಳ ಹೊರಗೆ ಸಾರ್ವಜನಿಕರಿಗೆ ಕಾಣುವ ರೀತಿಯಲ್ಲಿ ಪರದೆಗಳನ್ನು ಅಳವಡಿಸಬಾರದು. ಪಟಾಕಿ ಸಿಡಿಸುವುದು ಮತ್ತು ಅಪಾಯಕಾರಿ ವಸ್ತುಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ