Select Your Language

Notifications

webdunia
webdunia
webdunia
webdunia

IPL 2026: ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲು ಬೌಲಿಂಗ್ ಆಯ್ಕೆ

RCB 2026
ಲಕ್ನೋ: ಐಪಿಎಲ್ 2026 ರಲ್ಲಿ ಇಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಟಾಶ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿದೆ.
 

ಲಕ್ನೋದ ಏಖನಾ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ತಂಡ ಕಳೆದ ಪಂದ್ಯದಲ್ಲಿ ಸೋಲು ಅನುಭವಿಸಿತ್ತು. ಹೀಗಾಗಿ ಇಂದು ಗೆದ್ದು ಮತ್ತೆ ಎರಡನೇ ಸ್ಥಾನಕ್ಕೇರುವ ಅವಕಾಶ ಪಡೆದುಕೊಂಡಿದೆ.

ಈ ಪಂದ್ಯಕ್ಕೆ ಆರ್ ಸಿಬಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ. ಲಕ್ನೋ ತಂಡ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಅರ್ಷಿನ್ ಕುಲಕರ್ಣಿ ಮತ್ತು ಶಹಬಾಜ್ ಅಹ್ಮದ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಲಕ್ನೋ ಈಗಾಗಲೇ ಐದು ಪಂದ್ಯಗಳಲ್ಲಿ ಸತತವಾಗಿ ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಪ್ಲೇ ಆಫ್ ಆಸೆಯಂತೂ ಭಗ್ನವಾಗಿದೆ. ಆದರೆ ತವರಿನಲ್ಲಿ ಪಂದ್ಯ ಗೆದ್ದು ಪ್ರತಿಷ್ಠೆಯ ಉಳಿಸಿಕೊಳ್ಳುವ ವಿಶ್ವಾಸದಲ್ಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಸೂರ್ಯಕುಮಾರ್‌ ಯಾದವ್‌: ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಅಲಭ್ಯ