Publish Date: Tue, 16 Dec 2025 (16:55 IST)
Updated Date: Tue, 16 Dec 2025 (16:57 IST)
ಮೈಸೂರು: ಇಂದು ಐಪಿಎಲ್ ಮಿನಿ ಹರಾಜು ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಆರ್‌ಸಿಬಿ ಚಾಂಪಿಯನ್ ಆಗಿರುವುದರಿಂದ ತವರು ನೆಲದಲ್ಲಿಯೇ ಉದ್ಘಾಟನಾ ಪಂದ್ಯ ಆರಂಭವಾಗಬೇಕೆಂದು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದರು.
ಮಾನಸ ಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗಾವಿ ವಿಧಾನಮಂಡಲ ಅಧಿವೇಶನದ ನಂತರ ಗೃಹ ಸಚಿವ ಜಿ.ಪರಮೇಶ್ವರ ಅವರೊಂದಿಗೆ ಮಾತನಾಡಲಾಗುವುದು ಎಂದರು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಸರ್ಕಾರದ ಹಸಿರು ನಿಶಾನೆ ಅಗತ್ಯವಿತ್ತು. ಮೌಖಿಕ ಒಪ್ಪಿಗೆಯನ್ನು ರಾಜ್ಯ ಸರ್ಕಾರ ಈಗಾಗಲೇ ನೀಡಿದ್ದು, ಶೀಘ್ರದಲ್ಲಿಯೇ ಲಿಖಿತ ಅನುಮತಿ ದೊರೆಯಲಿದೆ ಎಂದು ಹೊಸ ಭರವಸೆ ನೀಡಿದರು.
ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಉಂಟಾದ ಕಾಲ್ತುಳಿತ ಪ್ರಕರಣದಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಹಾಗೂ ಐಪಿಎಲ್ ಪಂದ್ಯಗಳನ್ನು ಮತ್ತೆ ಆಯೋಜಿಸುವ ವಾತಾವರಣ ನಿರ್ಮಿಸುವುದು ಸುಲಭವಿರಲಿಲ್ಲ. ರಾಜ್ಯ ಸರ್ಕಾರದ ಬೆಂಬಲ ಅಗತ್ಯವಿತ್ತು. ಈ ಬಗ್ಗೆ ಬಿಸಿಸಿಐ ಜೊತೆಯೂ ಮಾತನಾಡಲಾಗಿದೆ ಎಂದು ಹೇಳಿದರು.