Publish Date: Tue, 04 Aug 2020 (10:06 IST)
Updated Date: Tue, 04 Aug 2020 (10:09 IST)
ಮುಂಬೈ: ಸೆಪ್ಟೆಂಬರ್ ನಲ್ಲಿ ಯುಎಇನಲ್ಲಿ ನಡೆಯಲಿರುವ ಐಪಿಎಲ್ ಕೂಟದಲ್ಲಿ ಭಾಗವಹಿಸಲು ಎಲ್ಲಾ ತಂಡಗಳು ಆಗಸ್ಟ್ 20 ರ ಬಳಿಕ ಅರಬ್ ರಾಷ್ಟ್ರಕ್ಕೆ ಪ್ರಯಾಣ ಬೆಳೆಸಲಿವೆ ಎಂದು ಬಿಸಿಸಿಐ ಹೇಳಿದೆ.
ಐಪಿಎಲ್ ಆಡಳಿತ ಮಂಡಳಿ ಸಭೆಯ ಬಳಿಕ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಆಗಸ್ಟ್ 20 ರ ಬಳಿಕ ಒಂದೊಂದೇ ತಂಡ ಯುಎಇಗೆ ಪ್ರಯಾಣ ಬೆಳೆಸಲಿದೆ. ಅಲ್ಲಿ ಕ್ವಾರಂಟೈನ್ ಗೊಳಗಾಗಿ ಬಳಿಕ ತರಬೇತಿ ಕ್ಯಾಂಪ್ ನಲ್ಲಿ ಪಾಲ್ಗೊಳ್ಳಲಿವೆ. ವಿದೇಶದಿಂದ ಬಂದ ಪ್ರಯಾಣಿಗರಿಗೆ 14 ದಿನಗಳ ಕಡ್ಡಾಯ ಕ್ವಾರಂಟೈನ್ ಗೊಳಗಾಗಲು ಯುಎಇ ಸರ್ಕಾರ ಆದೇಶ ಹೊರಡಿಸಿದೆ. ಹೀಗಾಗಿ ಮುಂಚಿತವಾಗಿಯೇ ಆಟಗಾರರು ಯುಎಇಗೆ ತೆರಳಲಿದ್ದಾರೆ.