Webdunia - Bharat's app for daily news and videos

Install App

ನಿಯಮ ಮುರಿದು ಮತ್ತೆ ಬಿಸಿಸಿಐ ಕೆಂಗಣ್ಣಿಗೆ ಗುರಿಯಾದ ಇಶಾನ್ ಕಿಶನ್

Krishnaveni K
ಶುಕ್ರವಾರ, 1 ಮಾರ್ಚ್ 2024 (13:20 IST)
Photo Courtesy: Twitter
ಮುಂಬೈ: ರಣಜಿ ಟ್ರೋಫಿಯಲ್ಲಿ ಆಡದೇ ಇದ್ದ ಕಾರಣಕ್ಕೆ ವಾರ್ಷಿಕ ಗುತ್ತಿಗೆಯಿಂದ ಹೊರಗುಳಿದಿದ್ದ ಇಶಾನ್ ಕಿಶನ್ ಈಗ ಮತ್ತೊಂದು ಪ್ರಮಾದವೆಸಗಿದ್ದು ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಲಿದ್ದಾರೆ.

ರಣಜಿ ಟ್ರೋಫಿ ಫಾರ್ಮ್ಯಾಟ್ ನಲ್ಲಿ ಆಡದ ಇಶಾನ್ ಕಿಶನ್ ಟಿ20 ಕ್ರಿಕೆಟ್ ಮಾದರಿಯಲ್ಲಿ ಆಡಿದ್ದರು. ಡಿವೈ ಪಾಟೀಲ್ ಟಿ20 ಟೂರ್ನಿಯಲ್ಲಿ ಇಶಾನ್ ಆಡಿದ್ದರು. ಆದರೆ ಅಲ್ಲೂ ಅವರು ವೈಫಲ್ಯಕ್ಕೊಳಗಾಗಿದ್ದರು. ಆದರೆ ವಿಷಯವಿರುವುದು ಅಲ್ಲಲ್ಲ. ಇಶಾನ್ ಈ ಪಂದ್ಯಕ್ಕೆ ತೊಟ್ಟಿದ್ದ ಹೆಲ್ಮಟ್ ಈಗ ವಿವಾದಕ್ಕೆ ಕಾರಣವಾಗಿದೆ.

ದೇಶೀಯ ಕ್ರಿಕೆಟ್ ನಲ್ಲಿ ಆಡುವಾಗ ಆಟಗಾರರು ಬಿಸಿಸಿಐ ಲೋಗೋ ಇರುವ ಹೆಲ್ಮೆಟ್ ಧರಿಸುವಂತಿಲ್ಲ. ಆದರೆ ಇಶಾನ್ ಡಿವೈ ಪಾಟೀಲ್ ಟೂರ್ನಿ ಆಡುವಾಗ ಬಿಸಿಸಿಐ ಲೋಗೋ ಇರುವ ಹೆಲ್ಮೆಟ್ ‍ಧರಿಸಿ ನಿಯಮ ಉಲ್ಲಂಘಿಸಿದ್ದಾರೆ. ಹೀಗಾಗಿ ಮತ್ತೆ ಇಶಾನ್ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗುವ ಸಾಧ‍್ಯತೆಯಿದೆ.

ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಸೂಚನೆ ಹೊರತಾಗಿಯೂ ಇಶಾನ್ ರಣಜಿ ಟ್ರೋಫಿಯಲ್ಲಿ ಆಡಿಲ್ಲ. ಈ ವಿಚಾರಕ್ಕೆ ಅಸಮಾಧಾನಗೊಂಡ ಬಿಸಿಸಿಐ ಅವರನ್ನು ಇತ್ತೀಚೆಗೆ ಬಿಡುಗಡೆ ಮಾಡಿದ ವಾರ್ಷಿಕ ಗುತ್ತಿಗೆ ಪಟ್ಟಿಯಿಂದ ಹೊರಹಾಕಿದೆ. ಅವರ ಜೊತೆಗೆ ಇದೇ ತಪ್ಪು ಮಾಡಿರುವ ಶ್ರೇಯಸ್ ಅಯ್ಯರ್ ಗೂ ಇದೇ ಶಿಕ್ಷೆ ನೀಡಿದೆ. ಈ ವಿಚಾರ ಈಗ ಭಾರೀ ಸುದ್ದಿಯಾಗಿದೆ. ಇದರ ನಡುವೆಯೇ ಇಶಾನ್ ಮತ್ತೊಂದು ತಪ್ಪು ಮಾಡಿ ಸಿಕ್ಕಿಹಾಕಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಈ ವಿಚಾರಕ್ಕೆ ಯಾವತ್ತೂ ಹಿಂದೆ ಸರಿಯುವುದಿಲ್ಲ: ಚೇತೇಶ್ವರ ರಿಯ್ಯಾಕ್ಷನ್

ಕಾಲ್ತುಳಿತ ಘಟನೆ ಬಳಿಕ ಆರ್ ಸಿಬಿ ಮೊದಲ ಪೋಸ್ಟ್: ಮಹತ್ವದ ಘೋಷಣೆ

ಒಂದೇ ವರ್ಷಕ್ಕೆ ಡೆಲ್ಲಿ ಬಿಟ್ಟು ಈ ತಂಡವನ್ನು ಸೇರಿಕೊಳ್ಳಲಿದ್ದಾರೆ ಕೆಎಲ್ ರಾಹುಲ್

ಮೊಹಮ್ಮದ್ ಶಮಿಯನ್ನು ಟೀಂ ಇಂಡಿಯಾಕ್ಕೆ ಯಾಕೆ ಆಯ್ಕೆ ಮಾಡ್ತಿಲ್ಲ: ಶಾಕಿಂಗ್ ಹೇಳಿಕೆ ನೀಡಿದ ವೇಗಿ

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಿಂದ ಸ್ಪಷ್ಟನೆ ಕೇಳಿದ ಬೆನ್ನಲ್ಲೇ ಐಪಿಎಲ್‌ಗೆ ರವಿಚಂದ್ರನ್‌ ಅಶ್ವಿನ್ ಗುಡ್‌ಬೈ

ಮುಂದಿನ ಸುದ್ದಿ
Show comments