Webdunia - Bharat's app for daily news and videos

Install App

92 ವರ್ಷಗಳಲ್ಲಿ ಇದೇ ಮೊದಲು ಇಂತಹ ದಾಖಲೆ ಮಾಡಿದ ರಾಹುಲ್, ಜೈಸ್ವಾಲ್, ಜಡೇಜಾ

Krishnaveni K
ಶನಿವಾರ, 27 ಜನವರಿ 2024 (13:35 IST)
ಹೈದರಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಗರಾದ ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ಅಪರೂಪದ ದಾಖಲೆಯೊಂದನ್ನು ಮಾಡಿದ್ದಾರೆ.

ಭಾರತ ಮೊದಲ ಇನಿಂಗ್ಸ್ ನಲ್ಲಿ 436 ರನ್ ಗಳಿಗೆ ಆಲೌಟ್ ಆಗಿತ್ತು. ಇದರಲ್ಲಿ ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ ಮತ್ತು ಜಡೇಜಾ ರನ್ ಕೊಡುಗೆ ಮಹತ್ವದ್ದಾಗಿತ್ತು. ಜೈಸ್ವಾಲ್ 80 ರನ್ ಗಳಿಸಿದರೆ, ರಾಹುಲ್ 86 ರನ್ ಗಳಿಸಿದ್ದರು. ಜಡೇಜಾ ಕೂಡಾ 87 ರನ್ ಗಳಿಸಿದರು. ಈ ಮೂಲಕ ಮೂವರೂ ಶತಕ ಮಿಸ್ ಮಾಡಿಕೊಂಡರು.

ಇದು ಅಭಿಮಾನಿಗಳಿಗೆ ನಿರಾಸೆ ತಂದಿರಬಹುದು. ಆದರೆ ಈ ಮೂವರೂ 92 ವರ್ಷಗಳ ಬಳಿಕ ಅಪರೂಪದ ದಾಖಲೆಯೊಂದನ್ನು ಮಾಡಿದ್ದಾರೆ. ಒಂದು ಟೆಸ್ಟ್ ಪಂದ್ಯದ ಒಂದೇ ಇನಿಂಗ್ಸ್ ನಲ್ಲಿ ಮೂವರು ಬ್ಯಾಟಿಗರು 80 ರ ಆಸುಪಾಸಿನಲ್ಲಿ ಔಟಾಗುತ್ತಿರುವುದು ಕಳೆದ 92 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲು.

ಇದೀಗ ದ್ವಿತೀಯ ಇನಿಂಗ್ಸ್ ನಲ್ಲಿ ಇಂಗ್ಲೆಂಡ್ ಮತ್ತೆ ಉತ್ತಮ ಆರಂಭ ಪಡೆದರೂ ಬಳಿಕ ತ್ವರಿತವಾಗಿ 4 ವಿಕೆಟ್ ಕಳೆದುಕೊಂಡಿತು. ಇತ್ತೀಚೆಗಿನ ವರದಿ ಬಂದಾಗ 4 ವಿಕೆಟ್ ನಷ್ಟಕ್ಕೆ  154 ರನ್ ಗಳಿಸಿದೆ. ಒಲಿ ಪಾಪ್ 56 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ. ಭಾರತದ ಪರ ಜಸ್ಪ್ರೀತ್ ಬುಮ್ರಾ 2, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ತಲಾ 1 ವಿಕೆಟ್ ಕಬಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments