ಮುಂಬೈ: ವಿಶ್ವಕಪ್ ಹಿನ್ನಲೆಯಲ್ಲಿ ಐಪಿಎಲ್ ನಲ್ಲಿ ಗಾಯಗೊಳ್ಳುವ ಸಮಸ್ಯೆ ಬಗ್ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ಜಸ್ಪ್ರೀತ್ ಬುಮ್ರಾ ರೂಪದಲ್ಲಿ ಶಾಕ್ ಸಿಕ್ಕಿದೆ.
ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುವ ಬುಮ್ರಾ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಭುಜದ ನೋವಿನಿಂದ ಕುಸಿದು ಬಿದ್ದಿರುವುದು, ಟೀಂ ಇಂಡಿಯಾಕ್ಕೆ ಆತಂಕ ತಂದಿದೆ.
ಟೀಂ ಇಂಡಿಯಾದ ಪ್ರಮುಖ ವೇಗಿಯಾಗಿರುವ ಬುಮ್ರಾ, ಇಂಗ್ಲೆಂಡ್ ನಲ್ಲಿ ನಡೆಯಲಿರುವ ವಿಶ್ವಕಪ್ ತಂಡದಲ್ಲಿ ಇದ್ದರೆ ಮಾತ್ರ ತಂಡದ ಬೌಲಿಂಗ್ ಸಶಕ್ತವಾಗಲಿದೆ. ಆದರೆ ಇದೀಗ ಬುಮ್ರಾ ಗಾಯಗೊಂಡಿರುವುದು ಭಾರತ ತಂಡದ ಆತಂಕಕ್ಕೆ ಕಾರಣವಾಗಿದೆ. ಆದರೆ ಬುಮ್ರಾ ಗಾಯ ಗಂಭೀರವಲ್ಲ, ಮುಂದಿನ ಪಂದ್ಯಕ್ಕೆ ಅವರು ಲಭ್ಯರಾಗಬಹುದು ಎಂದು ತಂಡ ಹೇಳಿಕೊಂಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ