Select Your Language

Notifications

webdunia
webdunia
webdunia
webdunia

ರಾಂಚಿ ಟೆಸ್ಟ್ ಪಂದ್ಯಕ್ಕೆ ಜಸ್ಪ್ರೀತ್ ಬುಮ್ರಾ ಔಟ್?

Jasprit Bumrah

Krishnaveni K

ರಾಂಚಿ , ಸೋಮವಾರ, 19 ಫೆಬ್ರವರಿ 2024 (12:45 IST)
Photo Courtesy: Twitter
ರಾಂಚಿ: ಭಾರತ ಮತ್ತು ಇಂಗ್ಲೆಂಡ್ ನಡುವೆ ರಾಂಚಿಯಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಹೊರಗುಳಿಯಲಿದ್ದಾರೆ ಎನ್ನಲಾಗಿದೆ.

ಜಸ್ಪ್ರೀತ್ ಬುಮ್ರಾ ಕಳೆದ ಮೂರು ಪಂದ್ಯಗಳಲ್ಲಿ ಸತತವಾಗಿ ಸುದೀರ್ಘ ಸ್ಪೆಲ್ ಬೌಲಿಂಗ್ ನಡೆಸಿ ಬಳಲಿದ್ದಾರೆ. ಹೀಗಾಗಿ ಅವರು ಗಾಯದ ಭೀತಿಯಲ್ಲಿದ್ದು, ಮುಂದಿನ ಪಂದ್ಯಕ್ಕೆ ಅವರಿಗೆ ವಿಶ್ರಾಂತಿ ನೀಡುವ ಸಾಧ‍್ಯತೆಯಿದೆ ಎಂದು ವರದಿಯಾಗಿದೆ. ಸರಣಿಯಲ್ಲಿ ಭಾರತ 2-1 ರಿಂದ ಮುನ್ನಡೆಯಲ್ಲಿದ್ದು, ಉಳಿದ ಎರಡು ಪಂದ್ಯಗಳ ಪೈಕಿ ಒಂದು ಪಂದ್ಯ ಗೆದ್ದರೂ ಸರಣಿ ಕೈ ವಶ ಮಾಡಿಕೊಳ್ಳಲಿದೆ.

ಇಂದು ಟೀಂ ಇಂಡಿಯಾ ರಾಂಚಿಗೆ ಪ್ರಯಾಣ ಬೆಳೆಸಲಿದ್ದು, ತಂಡದ ಜೊತೆ ಬುಮ್ರಾ ಪ್ರಯಾಣ ನಡೆಸುವ ಸಾಧ‍್ಯತೆ ಕಡಿಮೆ ಎನ್ನಲಾಗಿದೆ. ಒಂದು ವೇಳೆ ರಾಂಚಿ ಟೆಸ್ಟ್ ಪಂದ್ಯವನ್ನು ಬುಮ್ರಾ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಗೆದ್ದ ಅಹಮ್ಮದಾಬಾದ್ ನಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯಕ್ಕೂ ಅವರು ಅಲಭ್ಯರಾಗುವ ಸಾಧ‍್ಯತೆಯಿದೆ.

ಕಳೆದ ವರ್ಷ ಬುಮ್ರಾ ಬೆನ್ನಿನ ಶಸ್ತ್ರಚಿಕಿತ್ಸೆಗೊಳಗಾದ ಬಳಿಕ ಅವರಿಗೆ ಹೆಚ್ಚು ವರ್ಕ್ ಲೋಡ್ ಆಗದಂತೆ ಟೀಂ ಇಂಡಿಯಾ ಕಾಪಾಡಿಕೊಳ‍್ಳುತ್ತಿದೆ. ಮುಂಬರುವ ಟಿ20 ವಿಶ್ವಕಪ್ ಹಿನ್ನಲೆಯಲ್ಲಿ ಬುಮ್ರಾ ಫಿಟ್ ಆಗಿರುವುದು ಮುಖ್ಯವಾಗಿದೆ. ಹೀಗಾಗಿ ಅವರು ಸತತವಾಗಿ ಕ್ರಿಕೆಟ್ ಆಡಿ ಬಳಲಿರುವ ಕಾರಣ ವೈದ್ಯರು ವಿಶ್ರಾಂತಿಗೆ ಸೂಚಿಸಿದರೆ ಮುಂದಿನ ಪಂದ್ಯಕ್ಕೆ ಲಭ್ಯರಿರುವುದು ಅನುಮಾನ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಇಂಗ್ಲೆಂಡ್ ಮುಂದಿನ ಪಂದ್ಯ ಯಾವಾಗ? ಎಲ್ಲಿ? ಇಲ್ಲಿದೆ ಮಾಹಿತಿ