Webdunia - Bharat's app for daily news and videos

Install App

ಕ್ಯಾಪ್ಟನ್ ಆಗಿ ಟೀಂ ಇಂಡಿಯಾಗೆ ಕಮ್ ಬ್ಯಾಕ್ ಮಾಡಿದ ಜಸ್ಪ್ರೀತ್ ಬುಮ್ರಾ

Webdunia
ಸೋಮವಾರ, 31 ಜುಲೈ 2023 (20:20 IST)
ಮುಂಬೈ: ಕಳೆದ ಒಂದು ವರ್ಷದಿಂದ ಗಾಯದ ಸಮಸ್ಯೆಯಿಂದ ಕ್ರಿಕೆಟ್ ಕಣದಿಂದ ದೂರವಿದ್ದ ವೇಗಿ ಜಸ್ಪ್ರೀತ್ ಬುಮ್ರಾ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಐರ್ಲೆಂಡ್  ವಿರುದ್ಧದ ಟಿ20 ಸರಣಿಗೆ ಅವರು ನಾಯಕನಾಗಿ ತಂಡಕ್ಕೆ ವಾಪಸಾಗುತ್ತಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧ ಸರಣಿ ಮುಗಿದ ಬಳಿಕ ಟೀಂ ಇಂಡಿಯಾ ಐರ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಸರಣಿಗೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಕೋಚ್ ರಾಹುಲ್ ದ್ರಾವಿಡ್ ಗೂ ವಿಶ್ರಾಂತಿ ನೀಡಲಾಗಿದೆ.

ವಿವಿಎಸ್ ಲಕ್ಷ್ಮಣ್ ತಂಡದ ಮುಖ್ಯ ಕೋಚ್ ಆಗಿರಲಿದ್ದು, ಜಸ್ಪ್ರೀತ್ ಬುಮ್ರಾ ನಾಯಕರಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಈ ಮೂಲಕ ತಂಡಕ್ಕೆ ವಾಪಸ್ ಆಗುತ್ತಲೇ ಬುಮ್ರಾಗೆ ದೊಡ್ಡ ಜವಾಬ್ಧಾರಿ ಸಿಗಲಿದೆ. ಜೊತೆಗೆ ಮುಂಬರುವ ಏಷ್ಯಾ ಕಪ್, ಏಕದಿನ ವಿಶ್ವಕಪ್ ಗೆ ಮುನ್ನ ಬುಮ್ರಾಗೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅಭ್ಯಾಸವಾಗಲು ಉತ್ತಮ ವೇದಿಕೆ ಸಿಕ್ಕಂತಾಗಲಿದೆ.

ಐರ್ಲೆಂಡ್ ಟಿ20 ಸರಣಿಗೆ ಟೀಂ ಇಂಡಿಯಾ ಇಂತಿದೆ.

ಜಸ್ಪ್ರೀತ್ ಬುಮ್ರಾ (ನಾಯಕ), ಋತುರಾಜ್ ಗಾಯಕ್ ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಶಹಬಾಝ್ ಅಹಮ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ ಕೃಷ್ಣ, ಅರ್ಷ್ ದೀಪ್ ಸಿಂಗ್, ಮುಕೇಶ್ ಕುಮಾರ್, ಆವೇಶ್ ಖಾನ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments