ಕೊಲೊಂಬೋ: ಪತ್ನಿಯ ಹೆರಿಗೆ ನಿಮಿತ್ತ ಏಷ್ಯಾ ಕಪ್ ಕೂಟದ ನಡುವೆ ತವರಿಗೆ ಮರಳಿದ್ದ ಟೀಂ ಇಂಡಿಯಾ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಮತ್ತೆ ತಂಡವನ್ನು ಕೂಡಿಕೊಂಡಿದ್ದಾರೆ.
ಕೊಲೊಂಬೋದ ಪ್ರೇಮದಾಸ ಸ್ಟೇಡಿಯಂನಲ್ಲಿ ಭಾನುವಾರ ಭಾರತ-ಪಾಕ್ ನಡುವೆ ಸೂಪರ್ ಫೋರ್ ಪಂದ್ಯ ನಡೆಯಲಿದೆ. ಇದಕ್ಕೆ ಮೊದಲು ಬುಮ್ರಾ ತಂಡವನ್ನು ಸೇರಿಕೊಂಡಿದ್ದಾರೆ.
ಕಳೆದ ನೇಪಾಳ ವಿರುದ್ಧದ ಪಂದ್ಯದಲ್ಲಿ ಬುಮ್ರಾ ಆಡಿರಲಿಲ್ಲ. ಪತ್ನಿ ಸಂಜನಾ ಗಣೇಶ್ ಗಂಡು ಮಗುವಿಗೆ ಜನ್ಮ ನೀಡಿದ್ದು ಈ ನಿಮಿತ್ತ ಅವರು ಮುಂಬೈಗೆ ಮರಳಿದ್ದರು. ಇದೀಗ ಮತ್ತೆ ತಂಡಕ್ಕೆ ಸೇರ್ಪಡೆಯಾಗಿದ್ದು, ಅಭ್ಯಾಸದಲ್ಲಿ ಭಾಗಿಯಾಗಿದ್ದಾರೆ.