Publish Date: Mon, 03 Oct 2022 (21:53 IST)
Updated Date: Mon, 03 Oct 2022 (21:56 IST)
ಮುಂಬೈ: ಟೀಂ ಇಂಡಿಯಾ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್ ನಿಂದ ಹೊರಗುಳಿಯುವುದು ಖಚಿತವಾಗಿದೆ.
ಬಿಸಿಸಿಐ ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ಬೆನ್ನು ನೋವಿನಿಂದ ಬಳಲುತ್ತಿರುವ ಬುಮ್ರಾ ಅಧಿಕೃತವಾಗಿ ವಿಶ್ವಕಪ್ ನಲ್ಲಿ ಭಾಗಿಯಾಗುತ್ತಿಲ್ಲ ಎಂದಿದೆ.
ಮೊನ್ನೆಯಷ್ಟೇ ಕೋಚ್ ರಾಹುಲ್ ದ್ರಾವಿಡ್, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಬುಮ್ರಾ ಇನ್ನೂ ಅಧಿಕೃತವಾಗಿ ಟೂರ್ನಿಯಿಂದ ಹೊರಹೋಗಿಲ್ಲ. ಅವರ ಆರೋಗ್ಯ ಸ್ಥಿತಿ ಬಗ್ಗೆ ಎನ್ ಸಿಎ ಅಧಿಕಾರಿಗಳು ಅಧಿಕೃತವಾಗಿ ವರದಿ ನೀಡಿದ ನಂತರವಷ್ಟೇ ನಿರ್ಧಾರವಾಗಲಿದೆ ಎಂದಿದ್ದರು.
-Edited by Rajesh Patil